ಬೆಂಗಳೂರು : ವಿಶ್ವ ಹೃದಯ ದಿನದ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ ಬಿರುಸಿನ ನಡಿಗೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.
ವಿಧಾನಸೌಧ ಆವರಣದಲ್ಲಿನ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ವಾಕಥಾನ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ, ಕಂಠೀರವ ಕ್ರೀಡಾಂಗಣದವರೆಗೆ ಅವರು ಬಿರುಸಿನ ನಡಿಗೆ ನಡೆದರು.

ವಿಶ್ವ ಹೃದಯ ದಿನಾಚರಣೆ ಹಾಗೂ ವಿಶ್ವ ಹಿರಿಯ ನಾಗರೀಕರ ದಿನಾಚರಣೆಯ ಪ್ರಯುಕ್ತ “ಹೃದಯದಿಂದ ಬಾಂಧವ್ಯ ಬೆಳೆಸೋಣ” ( Use Heart to Connect) ಎಂಬ ಘೋಷಣೆಯೊಂದಿಗೆ ಬಿರುಸಿನ ನಡಿಗೆ ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರೂ ತಮ್ಮ ಉತ್ತಮ ಆರೋಗ್ಯಕ್ಕಾಗಿ ವ್ಯಾಯಾಮ ಮಾಡಬೇಕು. ಪ್ರತಿಯೊಬ್ಬರ ಆರೋಗ್ಯ ಮುಖ್ಯ. ಇದರಿಂದ ರಾಜ್ಯವನ್ನ ಆರೋಗ್ಯಕರವಾಗಿಡಬಹುದು ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಸಂಸದ ಪಿ ಸಿ ಮೋಹನ್ ಮತ್ತು ಇತ್ತು ಉಪಸ್ಥಿತರಿದ್ದರು.