ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಬ್ಬರು ಶಾಸಕರನ್ನು ತಮ್ಮ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಶಾಸಕ, ಮಾಜಿ ಸಚಿವ ಡಿ.ಎನ್.ಜೀವರಾಜ್ ಹಾಗೂ ಶಾಸಕ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಇವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದ್ದು, ಸಚಿವರಿಗೆ ಸಿಗುವ ಸರ್ಕಾರಿ ಸವಲತ್ತು ಇವರಿಗೂ ಲಭಿಸಲಿದೆ.
ರೇಣುಕಾಚಾರ್ಯ ಅವರು ಸಚಿವರಾಗಬೇಕು ಎನ್ನುವ ಆಶೆಯಲ್ಲಿದ್ದರು. ಈ ಹಿನ್ನೆಲೆಯಲ್ಲಿ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮೂಲಕ ಲಾಬಿ ನಡೆಸಿದ್ದರು. ಆದರೆ, ಸಚಿವ ಸ್ಥಾನದ ಆಸೆ ಈಡೇರಲಿಲ್ಲ, ಬದಲಾಗಿ ರಾಜಕೀಯ ಕಾರ್ಯದರ್ಶಿ ಹುದ್ದೆ ಲಭಿಸಿದೆ.
ಈ ಹಿಂದೆ ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಇವರಿಬ್ಬರೂ ಇದೇ ಹುದ್ದೆಯಲ್ಲಿದ್ದರು.