ಬಿಬಿಎಂಪಿ ಸೇರಿದಂತೆ ಇನ್ನಿತರ ಚುನಾವಣೆಗೆ ಪಕ್ಷ ಸಿದ್ಧ : ಸಚಿವ ಬೈರತಿ ಬಸವರಾಜ

ಬೆಂಗಳೂರು: ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ಸೇರಿದಂತೆ ಇನ್ನಿತರ ಎಲ್ಲ ಚುನಾವಣೆಗಳಿಗೂ ಪಕ್ಷ ಹಾಗೂ ನಾವೆಲ್ಲರೂ ಸಿದ್ದರಿದ್ದೇವೆ ಎಂದು ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದ ಅವರು ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಕೆಲವು ವಾರ್ಡ್‍ಗಳಲ್ಲಿ ಅತ್ಯಂತ ಹೆಚ್ಚು ಮತದಾರರಿದ್ದಾರೆ, ಆದ್ದರಿಂದ ಈ ವಾರ್ಡ್‍ಗಳನ್ನು ಮರು ವಿಂಗಡಣೆ ಮಾಡುವುದು ಅನಿವಾರ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಉಪ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಖಚಿತ : ಸಚಿವ ಸಿ.ಸಿ.ಪಾಟೀಲ್
ರಾಜ್ಯ ವಿಧಾನಸಭೆಯ ಎರಡು ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿಗಳ ಬಗ್ಗೆ ಪಕ್ಷ ನಿರ್ಧರಿಸಲಿದೆ. ಪಕ್ಷ ನಿರ್ಧರಿಸಿದ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ನಾವು ಪಾಲ್ಗೊಳ್ಳಲಿದ್ದೇವೆ ಎಂದು ಲೋಕೋಪಯೋಗಿ ಸಚಿವರಾದ ಸಿ.ಸಿ. ಪಾಟೀಲ್ ತಿಳಿಸಿದರು.


ಪಕ್ಷದ ಸೂಚನೆ ಮೇರೆಗೆ ರಾಜ್ಯ ಕಾರ್ಯಾಲಯಕ್ಕೆ ಭೇಟಿ ಕೊಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದ ಅವರು, ರಾಜ್ಯದಲ್ಲಿ 2017ರಿಂದ ಸತತ ಪ್ರವಾಹ ಕಾಡುತ್ತಿದೆ. ಲಭ್ಯ ಹಣಕಾಸಿನ ಇತಿಮಿತಿಯಲ್ಲಿ ರಸ್ತೆಗಳ ಗುಂಡಿ ಮುಚ್ಚಲು ಆದೇಶಿಸಲಾಗಿದೆ ಎಂದು ತಿಳಿಸಿದರು.
ಅನುದಾನ ಬಿಡುಗಡೆ ಬಗ್ಗೆ ಮುಖ್ಯಮಂತ್ರಿಗಳನ್ನು ಕೋರಲಾಗಿದೆ, ಹೆಚ್ಚಿನ ಅನುದಾನದ ಭರವಸೆ ನೀಡಿದ್ದಾರೆ ಎಂದು ವಿವರಿಸಿದ ಅವರು, ಹೊಸ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಾರಂಭಕ್ಕೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ವಿವರಿಸಿದರು. ಕುಸಿದ ಸೇತುವೆಗಳ ನಿರ್ಮಾಣ ಮಾಡುವುದಾಗಿ ತಿಳಿಸಿದ ಅವರು, ಕಳಪೆ ರಸ್ತೆ ಕಾಮಗಾರಿ ನಡೆದರೆ ತನಿಖೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

More News

You cannot copy content of this page