ರಾಜಕೀಯ ಕಾರ್ಯದರ್ಶಿಗಳ ಕಚೇರಿ ಪೂಜೆ ಮುಖ್ಯಮಂತ್ರಿ ಭಾಗಿ

ಬೆಂಗಳೂರು : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಶಾಸಕ, ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ವಿಕಾಸಸೌಧದಲ್ಲಿನ ತಮ್ಮ ಕೊಠಡಿಯಲ್ಲಿ ಇಂದು ಆಯೋಜಿಸಿದ್ದ ಪೂಜಾ ಕಾರ್ಯಕ್ರಮ ನೇರವೇರಿಸಿದರು.
ಪೂಜಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿದ್ದರು. ರೇಣುಕಾಚಾರ್ಯ ಅವರಿಗೆ ಇದೇ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಿಹಿ ತಿನ್ನಿಸಿ ಶುಭಕೋರಿದರು.


ರೇಣುಕಾಚಾರ್ಯ ಅವರು ಮುಖ್ಯಮಂತ್ರಿ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ರೇಣುಕಾಚಾರ್ಯ ಅವರ ಪರಿವಾರ ಕಚೇರಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಾಜಿ ಶಾಸಕ ಅಶೋಕ ಖೇಣಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಹಿಂದೆ ಬಿಎಸ್ ವೈ ನನ್ನ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದರು. ಅವರು ಕೂಡ ಇದೇ ಕೊಠಡಿಗೆ ಬಂದು ಶುಭಾಶಯ ಕೋರಿದ್ದರು ಎಂದು ನೆನಪು ಮಾಡಿಕೊಂಡರು. ಹಿಂದೆ ಬಿ ಎಸ್ ವೈ ಜತೆ ಕೆಲಸ ಮಾಡಿದ್ದೆ, ಈಗ ಸಿಎಂ ಬೊಮ್ಮಾಯಿ ಅವರ ಜತೆ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಮುಂಬರುವ ದಿನಗಳಲ್ಲಿ ಉತ್ತಮದಿನಗಳು ಬರುತ್ತವೆ ಎಂದು ಮುಖ್ಯಮಂತ್ರಿ ಹಾಗೂಕೇಂದ್ರದ ನಾಯಕರು ಹೇಳಿರುವ ಹಿನ್ನಲೆಯಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ ಅವರು ಸಚಿವ ಸ್ಥಾನ ಸಿಗದಿದ್ದಕ್ಕೆ ಯಾವುದೇ ಅತೃಪ್ತಿ ಇದೆಯಾ ಪ್ರಶ್ನೆಗೆ ಉತ್ತರಿಸಿದ ಅವರು ನಾನು ಈಗ ತೃಪ್ತಿ, ಅತೃಪ್ತಿ ಬಗ್ಗೆ ಮಾತನಾಡಲ್ಲ ಎಂದು ಹೇಳಿದರು.

More News

You cannot copy content of this page