ಬೆಂಗಳೂರು : ಮುಂಬರುವ ಉಪ ಚುನಾವಣೆಯಲ್ಲಿ ಯಾವ ಕ್ಷೇತ್ರದ ಉಸ್ತುವಾರಿ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರತಿ ಬಾರಿ ಉಪ ಚುನಾವಣೆ ಬಂದ ಸಂದರ್ಭದಲ್ಲಿ ನನ್ನ ಹೆಸರು ಕೇಳಿ ಬರುತ್ತೆ, ಆದರೆ, ನಾನು ಚುನಾವಣೆಗೆ ಸ್ಪರ್ಧಿಸಲು ನಮ್ಮ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದನಾಗಿರುವೆ ಎಂದು ತಿಳಿಸಿದ್ದಾರೆ.
ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಕೋರ್ ಕಮಿಟಿ ಸಭೆ ತೀರ್ಮಾನ ಕೈಗೊಳ್ಳಲಿದೆ, ಸಂಪುಟ ಸೇರ್ಪಡೆ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲು ಉಪ ಚುನಾವಣೆ ಮುಗಿಸೋಣ ಎಂದು ವಿಜಯೇಂದ್ರ ಪ್ರತಿಕ್ರಿಯೆ ನೀಡಿದರು.