ಬೆಂಗಳೂರು: ಮೈಸೂರು ದಸರಾ ಉದ್ಘಾಟಕರಾಗಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣಾ ಅವರ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿದರು.

ನಾಡ ಹಬ್ಬ ದಸರಾ ಮಹೋತ್ಸವ – 2021ರ ಉದ್ಘಾಟನೆಗೆ ಅಧಿಕೃತವಾಗಿ ಮುಖ್ಯಮಂತ್ರಿ ಅವರು ಆಹ್ವಾನ ನೀಡಿದರು.ಈ ಸಂದರ್ಭದಲ್ಲಿ ಪ್ರೇಮಾ ಕೃಷ್ಣ, ಕಂದಾಯ ಸಚಿವ ಆರ್ ಅಶೋಕ್, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಮೈಸೂರು ಮೇಯರ್ ಸುನಂದಾ ಪಾಲನೇತ್ರ ಉಪಸ್ಥಿತರಿದ್ದರು.
