ಉತ್ತರ ಪ್ರದೇಶ : ಉತ್ತರಪ್ರದೇಶದ ಹರಗಾಂವ್ ನಲ್ಲಿ ರೈತರಿಗೆ ಸ್ವಾಂತರ ಹೇಳಲು ಹೊರಟಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಬಂಧಿಸಿದ ಬಳಿಕ ಅವರನ್ನು ಸೀತಾಪುರ ಜಿಲ್ಲೆಯ ಅತಿಥಿ ಗೃಹಕ್ಕೆ ಕರೆದೊಯ್ದು ಬಂಧನದಲ್ಲಿಟ್ಟಿದ್ದಾರೆ ಎಂದು ರಾಷ್ಟ್ರೀಯ ಯೂಥ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಟ್ವೀಟ್ ಮಾಡಿದ್ದಾರೆ.

ಅವರು ಮಾಡಿರುವ ಟ್ವೀಟ್ ನಲ್ಲಿ ‘ಈ ದೇಶದಲ್ಲಿ ಏನಾಗುತ್ತಿದೆ? Z+ ಭದ್ರತೆಯಿರುವ ನಾಯಕಿಯನ್ನು ಯಾವುದೇ ವಾರಂಟ್ ಇಲ್ಲದೇ ಪೊಲೀಸರು ಬಂಧಿಸಿದ್ದಾರೆ’ ಎಂದು ಬರೆದಿದ್ದಾರೆ. ಹಾಗೆನೇ ಅವರನ್ನು ಅತಿಥಿಗೃಹಕ್ಕೆ ಕರೆದೂಯ್ದು ಬಂಧನದಲ್ಲಿಡಲಾಗಿದೆ ಎಂದು ತಿಳಿಸಿದ್ದಾರೆ.
ಆದರೆ, ಅಲ್ಲಿಗೆ ಹೋಗಿದ್ದ ಪ್ರಿಯಾಂಕ ಅತಿಥಿ ಗೃಹವನ್ನು ತಾವೇ ಖುದ್ದಾಗಿ ಗುಡಿಸಿ, ಸ್ವಚ್ಚಗೊಳಿಸಿದ್ದಾರೆ. ಸ್ವಂತ ಪ್ರಿಯಾಂಕಾ ಅವರೇ ಗುಡಿಸುತ್ತಿರುವ ವಿಡಿಯೋವನ್ನು ಕೂಡ ಶ್ರೀನಿವಾಸ್ ಟ್ವೀಟ್ ನಲ್ಲಿ ಹಂಚಿಕೊಂಡಿದ್ದಾರೆ.