ಬೆಂಗಳೂರು: ಪಕ್ಷದ ಹೈಕಮಾಂಡ್ ಅವರ ತುರ್ತು ಕರೆಯ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ನವದೆಹಲಿಗೆ ಪ್ರಯಾಣ ಬೆಳೆಸಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದ ಅವರು, ಇಂದು ಪಕ್ಷದ ಹೈಕಮಾಂಡ್ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿಮಾಡಲಿದ್ದಾರೆ.
ಯಾವ ವಿಚಾರಕ್ಕೆ ಹೈಕಮಾಂಡ್ ಬುಲಾವ್ ನೀಡಿದ್ದಾರೆ ಎನ್ನುವುದು ತಿಳಿದಿಲ್ಲ. ಭೇಟಿ ನಂತರ ವಿಚಾರ ತಿಳಿಯಲಿದೆ ಎಂದು ಅವರು ವಿಮಾನನಿಲ್ದಾಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಾಗೂ ರಾಜ್ಯದ ರಾಜಕಾರಣ ಸಂಬಂಧ ಅವರು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.