ಮೈಸೂರು : ಮೈಸೂರು ದಸರಾ ಮಹೋತ್ಸವ 2021ಕ್ಕೆ ನಾಳೆ ಅಧಿಕೃತ ಚಾಲನೆ ದೊರೆಯಲಿದೆ.ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಅಗ್ರಪೂಜೆ ಸಲ್ಲಿಸುವ ಮೂಲಕ ದಸರಾಗೆ ಮಹೋ ತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕೊರೋನ ಸೋಂಕು ದಸರಾವನ್ನು ಕಾಡಿತ್ತು.ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವೈಭವ ಕಳೆದ ಎಡರು ವರ್ಷದಿಂದ ಕಳೆಗುಂದಿದೆ.ಕೊರೊನಾ ನಡುವೆಯೂ ಸಹ ಐತಿಹಾಸಿಕ ಆಚರಣೆ ನಿಲ್ಲಬಾರದು ಎಂಬ ಉದ್ದೇಶದಿಂದ ಈ ವರ್ಷವೂ ಸರಳ ದಸರಾ ಆಚರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ನಾಳೆ ಬೆಳಗ್ಗೆ 8.15 ರಿಂದ 8.45ರ ಶುಭ ಮುಹೂರ್ತದಲ್ಲಿ ಎಸ್.ಎಂ.ಕೃಷ್ಣ ಅವರು ಚಾಮುಂಡಿ ಬೆಟ್ಟದಲ್ಲಿ ಬೆಳ್ಳಿ ರಥದಲ್ಲಿನ ಚಾಮುಂಡೇಶ್ವರಿ ತಾಯಿ ಉತ್ಸವ ಮೂರ್ತಿಗೆ ಪುಷ್ಪಾರ್ಚಾನೆ ಮಾಡುವ ಮೂಲಕ 2021 ರ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ.ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರು ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.ಕೊರೊನಾ ಹಿನ್ನಲೆಯಲ್ಲಿ ಕಾರ್ಯಕ್ರಮಕ್ಕೆ 100 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.ವರ್ಚುವಲ್ ಮುಖಾಂತರ ಜನ ಸಾಮಾನ್ಯರು ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಸಂಜೆ 6 ಗಂಟೆಗೆ ಅರಮನೆ ಮುಂಭಾಗದಲ್ಲಿನ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದು,ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಲಿದ್ದಾರೆ.ನಾಳೆಯಿಂದ ಏಳು ದಿನಗಳ ಕಾಲ ಅರಮನೆ ಮುಂಭಾಗ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.ಇಂದು ವಿದ್ಯುತ್ ದೀಪಾಲಂಕಾರಕ್ಕೆ ಮುಖ್ಯ ಮಂತ್ರಿ ಚಾಲನೆ ನೀಡಿದ್ದು, ಕುಸ್ತಿ ಪಂದ್ಯಾವಳಿ,ದಸರಾ ವಸ್ತು ಪ್ರದರ್ಶನ,ನಾಟಕ,ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೋವಿಡ್ ಮಾರ್ಗಸೂಚಿ ಹಿನ್ನಲೆಯಲ್ಲಿ ರದ್ದುಗೊಳಿಸಲಾಗಿದೆ.

ಅಕ್ಟೋಬರ್ 15 ರಂದು ಅರಮನೆ ಆವರಣದಲ್ಲಿ ಜಂಬೂ ಸವಾರಿ ಮೆರವಣಿಗೆ ನಡೆಯಲಿದ್ದು,ಸಂಜೆ ಪಂಜಿನ ಕವಾಯತು ಮೂ ಲಕ ದಸರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.ವಿಶೇಷವೆಂದರೆ ಈ ಭಾರಿ ಮುಖ್ಯಮಂತ್ರಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಗೆ ಇದು ಮೊದಲನೆಯ ದಸರಾ ಕಾರ್ಯಕ್ರಮವವಾಗಲಿದೆ.