ಜಲಾವೃತವಾಗುವ ಪ್ರದೇಶಗಳಿಗೆ ಶಾಶ್ವತ ಪರಿಹಾರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮಳೆ ಬಂದಾಗ ಬೆಂಗಳೂರಿನ ಜಲಾವೃತವಾಗುವ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮೈಸೂರು ಜಿಲ್ಲಾಡಳಿತದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮದವ ರೊಂದಿಗೆ ಮಾತನಾಡಿದ ಅವರು,ಭಾರಿ ಮಳೆ ಬಂದಾಗ ಬೆಂಗಳೂರು ನಗರದಲ್ಲಿ ಅತ್ಯಂತ ತಗ್ಗುಪ್ರದೇಶ,ಕೆರೆಗಳ ಆವರಣಗಳ ಭಾಗ,ರಾಜಾಕಾಲುವೆ ಭಾಗಗಳು ಜಲಾವೃತವಾಗುತ್ತಿವೆ.ಮಳೆ ಬಂದಾಗ ಸಮಸ್ಯೆಗಳನ್ನು ಸರಿಪಡಿಸುವುದು ತಾತ್ಕಾಲಿಕ ಪರಿಹಾರ ವಾಗುತ್ತದೆ.ಆದ್ದರಿಂದ ಜಲಾವೃತ್ತವಾ ಗುವ ಪ್ರದೇಶಗಳಲ್ಲಿ ಶಾಶ್ವತ ಪರಿಹಾರವನ್ನು ನೀಡಲು ಪುನರ್ನಿರ್ಮಾಣ ಮತ್ತು ಪುರ್ನ ವಸತಿ ಕಾರ್ಯ ವಾಗಬೇಕು ಎಂದು  ಅವರು ಹೇಳಿದರು

ರಾಜಾಕಾಲುವೆಯಲ್ಲಿ ಹಾಗೂ ಕೆರೆ ಆವರಣಗಳು ಒತ್ತುವರಿಯಾಗಿ ನಿರ್ಮಾಣವಾದ ವಸತಿಪ್ರದೇಶಗಳ ಬಗ್ಗೆ ಸರ್ವೇ ಮಾಡಿ ಪುನರ್ವಸತಿ ಕಲ್ಪಿಸಲಾಗುವುದು.ದೀರ್ಘಕಾಲಿಕ ಹಾಗೂ ಶಾಶ್ವತ  ಪರಿಹಾರ ನೀಡಲು ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ರಸ್ತೆಗಳು ನಿರ್ಮಾಣದ ಅವಧಿ,ನಿರ್ವಹಣೆ,ದುರಸ್ತಿ,ಗುಣಮಟ್ಟ ಹಾಗೂ ಕಳಪೆ ರಸ್ತೆ ನಿರ್ಮಿಸಿದ ಗುತ್ತಿಗೆದಾ ರರ ಬಗ್ಗೆ ಸಂಪೂರ್ಣ ವರದಿ ನೀಡಲು ಟಾಸ್ಕ್ ಫೋರ್ಸ್ ನ್ನು ರಚಿಸಲಾಗಿದೆ.ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ವೈಜ್ಞಾನಿಕವಾಗಿ ಆಗಬೇಕು.ಮಳೆ ಗಾಲವಾದ ನಂತರ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದು ಅವರು ವಿವರಿಸಿದರು.

ಚಾಮರಾಜನಗರ ಜಿಲ್ಲೆಯ ಹಿಂದುಳಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವುದು ನನ್ನ ಕರ್ತವ್ಯ. ಜಿಲ್ಲೆಯ ಸಮಗ್ರ ಅಭಿವೃದ್ಧಿ ಗೆ ಬದ್ಧನಾಗಿದ್ದೇನೆ ಎಂದು ತಿಳಿಸಿದರು.ದಸರಾ ಉತ್ಸವವನ್ನು ಎಸ್.ಎಂ.ಕೃಷ್ಣ ಉದ್ಘಾಟನೆ ಮಾಡಲಿದ್ದಾರೆ.ಒಬ್ಬ ಸಾಮಾನ್ಯ ನಾಗರಿಕನಾಗಿ ಈ ಬಾರಿಯ ದಸರಾ ಉತ್ಸವವನ್ನು ಮುನ್ನಡೆಸುತ್ತಿರುವುದು ನನಗೆ ಸಂತೋಷ ತಂದಿದೆ.ಕೋವಿಡ್ ನಿಂದಾಗಿ ಸರಳ ಹಾಗೂ ಸಾಂಪ್ರದಾಯಿಕವಾಗಿ ದಸರಾವನ್ನು ಆಚರಿಸಲಾಗುತ್ತಿದೆ.ಕನ್ನಡ ನಾಡು ಸುಭಿಕ್ಷವಾಗಿರಲೆಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದರು.

More News

You cannot copy content of this page