ಮೂರು ದಿನಗಳ ರಾಜ್ಯ ಭೇಟಿಗೆ ಆಗಮಿಸಿದ ರಾಷ್ಟ್ರಪತಿ

ಬೆಂಗಳೂರು:   ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಅವರು ತಮ್ಮ ಮೂರು ದಿನಗಳ ಕರ್ನಾಟಕ ಭೇಟಿಗೆ ಇಂದು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಷ್ಟ್ರಪತಿಗಳನ್ನು ಶಾಲು ಹಾಗೂ ಪೇಟ ತೊಡಿಸಿ ಆತ್ಮೀಯವಾಗಿ ಬರಮಾಡಿಕೊಂಡರು.

ಇದೇ ಸಂದರ್ಭದಲ್ಲಿ  ಸರ್ಕಾರದ ಮುಖ್ಯ  ಕಾರ್ಯದರ್ಶಿ ಪಿ.ರವಿಕುಮಾರ್, ಡಿಜಿ ಮತ್ತು ಐಜಿ ಪ್ರವೀಣ್ ಸೂದ್. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್. ಜೆ. ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಇಂದು ರಾಜಭವನದಲ್ಲೇ ಇರುವ ರಾಷ್ಟ್ರಪತಿ ಅವರು, ರಾಜ್ಯ ಉಚ್ಛ ನಾಯಾಲಯದ ನ್ಯಾಯಾಧೀಶರೊಂದಿಗೆ ಕಾಫಿಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ ಮೈಸೂರು ಮೂಲಕ ಬಿಳಿಗಿರಿ ರಂಗನ ಬೆಟ್ಟಕ್ಕೆ ತೆರಳಿ ಅಲ್ಲಿ,ದೇವರ ದರ್ಶನ ಮತ್ತು ಕಾರ್ಯಕ್ರದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಂತರ ಚಾಮರಾಜನಗರದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು,ಮಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ. ನಾಡಿದ್ದು ಶೃಂಗೇರಿ ಮಠದಲ್ಲಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡುನಂತರ ಅವರು ನವದೆಹಲಿ ಪ್ರಯಾಣ ಬೆಳೆಸಲಿದ್ದಾರೆ.

More News

You cannot copy content of this page