ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ

ಮಂಡ್ಯ : ಕೃಷ್ಣರಾಜ ಸಾಗರ ಅಣೆಕಟ್ಟು ಬಳಿ ಇಂದು ಮುಂಜಾನೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಂಪತಿ ಸಮೇತ ಕಾವೇರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.


ಪತ್ನಿ ಚನ್ನಮ್ಮ ಜತೆ ಸಿಎಂ ಸಾಂಪ್ರದಾಯಿಕ ಉಡುಗೆಯಾದ ರೇಷ್ಮೆ ಪಂಚೆ ಹಾಗೂ ಶರ್ಟ್ ತೊಟ್ಟು ಪೂಜೆ ಸಲ್ಲಿಸಿದರು. ಸಕಲ ಧಾರ್ಮಿಕ ಸಂಪ್ರದಾಯದೊಂದಿಗೆ ದಂಪತಿಗಳು ಪೂಜೆ ಸಲ್ಲಿಸಿದರು.


ನಂತರ ದಸರಾ ಉದ್ಘಾಟನೆಗಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್, ಬೈರತಿ ಬಸವರಾಜ್, ಸುನಿಲ್ ಕುಮಾರ, ಶಾಸಕ ಅರವಿಂದ ಬೆಲ್ಲದ ಮತ್ತು ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

More News

You cannot copy content of this page