ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್ ಎಂ ಕೃಷ್ಣ ಅವರು ಇಂದು ಉದ್ಘಾಟಿಸಿದರು.

ತಾಯಿ ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವವನ್ನು ಉದ್ಘಾಟಿಸಿದರು. ಇಂದು ಆರಂಭವಾದ ನಾಡಹಬ್ಬ ಸಂಭ್ರಮ ಒಂಭತ್ತು ದಿನಗಳವರೆಗೆ ನಡೆಯಲಿದ್ದು, ಕೊನೆಯದಿನ ಜಂಬೂಸವಾರಿನಡೆಸುವ ಮೂಲಕ ಅಂತ್ಯಗೊಳ್ಳಲಿದೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪತ್ನಿ ಚೆನ್ನಮ್ಮ , ಸಚಿವರಾದ ಆರ್ ಅಶೋಕ್, ಬೈರತಿ ಬಸವರಾಜ್, ಎಸ್ ಟಿ ಸೋಮಶೇಖರ್, ಬಿಸಿ ಪಾಟೀಲ್, ಸುನಿಲ್ ಕುಮಾರ್, ಶಶಿಕಲಾ ಜೊಲ್ಲೆ, ಸಂಸದ ಪ್ರತಾಪ್ ಸಿಂಹ, ಶಾಸಕ ರಾಮದಾಸ್, ಜಿಟಿ ದೇವೇಗೌಡ , ತನ್ವೀರ್ ಸೇಠ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.