ಲಖನೌ : ಲಖಿಂಪುರ –ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ವಾಹನ ಹರಿಸಿದ ಪ್ರಕರಣ ಸಂಬಂಧ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಇದುವರೆಗೂ ತಮ್ಮ ಕೈಗೆ ಸಿಕ್ಕಿಲ್ಲ ಎಂದು ಉತ್ತರಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಆತನ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿರುವ ಪೊಲೀಸರು, ಆತ ಎಲ್ಲಿದ್ದಾನೆಂಬ ಮಾಹಿತಿ ಲಭ್ಯವಾಗಿಲ್ಲ ಎಂದಿದ್ದಾರೆ. ಇದರ ನಡುವೆಯೇ ಆಶಿಶ್ ಪಾಂಡೆ ಮತ್ತು ಲವಕುಶ ಎಂಬ ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಆಶಿಶ್ ಬಂಧನವಾಗದೇ ಇದ್ದಿದ್ದಕ್ಕೆ ಪ್ರತಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಪ್ರಕರಣದಲ್ಲಿ ಆರೋಪಿಯ ಪಾತ್ರ ಪುಷ್ಠೀಕರಿಸುವ ವಿಡಿಯೋಗಳು ಇದ್ದರೂ ಕೂಡ ಸರ್ಕಾರ ಮಾತ್ರ ಕಾರ್ಯಪ್ರವೃತ್ತರಾಗದೇ ಇರುವುದು ದುರದೃಷ್ಟಕರ, ಹಾಗೂ ಬಿಜೆಪಿ ಸರ್ಕಾರಕ್ಕೆ ಇದು ಕಾಣುತ್ತಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಟೀಕಿಸಿದ್ದಾರೆ.
ಅಕ್ಟೋಬರ್ ಮೂರರಂದು ನಡೆದ ಈ ಘಟನೆಯಲ್ಲಿ ನಾಲ್ವರು ರೈತರು, ಒಬ್ಬ ಪರ್ತಕರ್ತ ಸೇರಿದಂತೆ ಒಟ್ಟು ಎಂಟು ಜನರು ಮೃತಪಟ್ಟಿದ್ದರು. ಹಲವಾರು ಜನರು ಗಾಯಗೊಂಡಿದ್ದರು. ಈ ಪ್ರಕರಣವನ್ನು ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ ಎಷ್ಟು ಜನರು ಆರೋಪಿಗಳ್ನು ಬಂಧಿಸಲಾಗಿದೆ ಎಂದು ಕೋರ್ಟ್ ರಾಜ್ಯ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡಿದೆ.