ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ- ನಳಿನ್ ಕುಮಾರ್ ಕಟೀಲ್ ವಿಶ್ವಾಸ

ಹಾನಗಲ್ : ಹಾನಗಲ್ ಮತ್ತು ಸಿಂದಗಿ ವಿಜಯಯಾತ್ರೆಯನ್ನು ಬಿಜೆಪಿ ಮುಂದುವರಿಸಿ 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೇರಲಿದೆ. 150 ಶಾಸಕರ ಸ್ಥಾನ ಗೆದ್ದು ಮತ್ತೆ ರಾಜ್ಯದಲ್ಲಿ ಸರಕಾರ ರಚಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಹಾನಗಲ್ ವಿಧಾನಸಭೆ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಶಿವರಾಜ ಸಜ್ಜನರ್ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ನಡೆದ ರೋಡ್ ಷೋನ ಪಾಲ್ಗೊಂಡು ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಯ ಹರಿಕಾರರಾದ ಸಿ.ಎಂ.ಉದಾಸಿ ಅವರ ನೆನಪಿನ ಜೊತೆ ಮತ್ತು ಅವರ ಅಭಿವೃದ್ಧಿಯ ಕಾರ್ಯಗಳನ್ನು ಮುಂದುವರಿಸುವ ದೃಷ್ಟಿಯಿಂದ ಶಿವರಾಜ ಸಜ್ಜನರ್ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ ಎಂದು ತಿಳಿಸಿದರು.
ಸಂಸದರಾದ ಶಿವಕುಮಾರ್ ಉದಾಸಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುತ್ತಿದೆ ಎಂದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಜ್ಜನಿಕೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿ ಕಾರ್ಯವನ್ನು ಮಾಡುತ್ತಿದ್ದಾರೆ. ಆದರ್ಶದ ರಾಜಕಾರಣ ಮಾಡುತ್ತಿರುವ ಬೊಮ್ಮಾಯಿ ಅವರ ಕೈಯನ್ನು ಬಲಪಡಿಸಲು ಈ ಕ್ಷೇತ್ರದಲ್ಲಿ ಶಿವರಾಜ ಅವರನ್ನು ಗೆಲ್ಲಿಸಿ ಎಂದು ವಿನಂತಿಸಿದರು.
ಸಿಂದಗಿಯಲ್ಲೂ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ


ಸಿಂದಗಿ ವಿಧಾನಸಭೆ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಭೂಸನೂರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸಚಿವರಾದ ಗೋವಿಂದ ಕಾರಜೋಳ, ಶ್ರೀಮತಿ ಶಶಿಕಲಾ ಜೊಲ್ಲೆ, ಕೆ.ಎಸ್.ಈಶ್ಚರಪ್ಪ, ವಿ. ಸೋಮಣ್ಣ, ಮಾಜಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ, ಜಿಲ್ಲಾಧ್ಯಕ್ಷರಾದ ಆರ್.ಎಸ್.ಪಾಟೀಲ ಕೂಚಬಾಳ, ಮತ್ತು ಮುಖಂಡರು ಉಪಸ್ಥಿತರಿದ್ದರು.

More News

You cannot copy content of this page