ಸಿಂಧಗಿ ಉಪಚುನಾವಣೆ : ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ

ಸಿಂಧಗಿ: ಸಿಂಧಗಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರು ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ನಡೆದ ಬೃಹತ್ ರೋಡ್ ಶೋನಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು.


ಈಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಧೃವನಾರಾಯಣ್, ಮಾಜಿ ಸಚಿವರಾದ ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಶಾಸಕರಾದ ಯಶವಂತ ರಾಯಗೌಡ ಮತ್ತಿತರರು ಉಪಸ್ಥಿತರಿದ್ದರು.
ಚುನಾವಣಾಧಿಕಾರಿಗಳಿಂದ ಡಿಕೆ ಶಿವಕುಮಾರ್ ವಾಹನ ತಪಾಸಣೆ


ಹಾನಗಲ್ ನಿಂದ ಸಿಂಧಗಿಗೆ ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿಂಧಗಿಗೆ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಮೊರಟಗಿ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿದ್ದ ವಾಹನ ತಪಾಸಣೆ ಮಾಡಿದರು. ನಂತರ ಅವರು ಸಿಂಧಗಿಗೆ ಕಡೆಗೆ ಪ್ರಯಾಣ ಬೆಳೆಸಿದರು.

More News

You cannot copy content of this page