ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ

ಬೆಂಗಳೂರು : ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರು ಇಂದು ಪದವಿಯ ಅಧಿಕಾರ ಪ್ರಮಾಣವಚನ ಸ್ವೀಕರಿಸಿದರು.


ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯನ್ಯಾಯಮೂರ್ತಿ ಅವರಿಗೆ ಪದವಿಯ ಅಧಿಕಾರ ಪ್ರಮಾಣವಚನ ಬೋಧಿಸಿದರು.


ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವರಾದ ಗೋವಿಂದ ಕಾರಜೋಳ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಇತರೆ ಪ್ರಮುಖರು ಉಪಸ್ಥಿತರಿದ್ದರು.

More News

You cannot copy content of this page