ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ವೃಷಭಾವತಿ ನಗರದಲ್ಲಿ ಮೂರು ಅಂತಸ್ತಿನ ಕಟ್ಟಡದ ಕೆಳ ಮಹಡಿ ಕುಸಿಯುವ ಹಂತದಲ್ಲಿದೆ. ಈ ಹಿನ್ನೆಲೆಯಲ್ಲಿ ಇಂದು ಸ್ಥಳೀಯ ಶಾಸಕರು ಹಾಗು ಅಬಕಾರಿ ಸಚಿವರಾದ ಕೆ ಗೋಪಾಲಯ್ಯನವರು ಬಿ ಬಿ ಎಂ ಪಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಮನೆಯಲ್ಲಿ ಬಾಡಿಗೆಗೆ ಇದ್ದವರನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಅಕ್ಕ ಪಕ್ಕದ ಮನೆಯಲ್ಲಿ ವಾಸವಿದ್ದವರನ್ನು ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಅವರುಗಳಿಗೆ ವಸತಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಸುತ್ತಮುತ್ತ ಇರುವ ಯಾರಿಗೂ ಹಾನಿಯಾಗದಂತೆ ತೆರವುಗೊಳಿಸುವಂತೆ ಬಿ ಬಿ ಎಂ ಪಿ ಅಧಿಕಾರಿಗಳೊಂದಿಗೆ ಸೂಚಿಸಲಾಗಿದೆ ಎಂದು ತಿಳಿಸಿದ ಸಚಿವರು, ಮನೆಯ ಮಾಲೀಕರು ನಾಪತ್ತೆಯಾಗಿದ್ದು. ಪೊಲೀಸ್ ರು ಹುಡುಕುತ್ತಿದ್ದಾರೆ ಎಂದರು.
ನಿರಾಶ್ರಿತರಿಗೆ ನಮ್ಮ ಮತ್ತು ಸರ್ಕಾರ ಕಡೆಯಿಂದ ನೆರವು ನೀಡಲಾಗುವುದು ಎಂದು ತಿಳಿಸಿದರು. ಸ್ಥಳಕ್ಕೆ ಬಿ ಬಿ ಎಂ ಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಮತ್ತು ತಜ್ಞರು,ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.