ಸಿದ್ದರಾಮಯ್ಯ ಒಂದು ಕುಟುಂಬದ ಹಿನ್ನೆಲೆ ಗಾಯಕರಾಗಿದ್ದಾರೆ ತಿರುಗೇಟು ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಟ್ವೀಟ್ ಮೂಲಕವೇ ಉತ್ತರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ನನ್ನ ತಂದೆ ನನಗೆ ಸಾರ್ವಜನಿಕ ಜೀವನದಲ್ಲಿ ಯಾವುದು ಉತ್ತಮ ಎಂಬುದನ್ನು ಕಲಿಸಿದ್ದಾರೆ, ಇದೇ ರೀತಿಯ ಮಾರ್ಗದರ್ಶನವನ್ನು ಅವರು ನಿಮಗೂ ಮಾಡಿರಬಹುದು ಎಂಬುದು ನನ್ನ ಭಾವನೆ ಎಂದು ಬರೆದಿದ್ದಾರೆ.

ನನ್ನ ತಂದೆ ರಾಷ್ಟ್ರೀಯವಾದಿ, ಅದನ್ನು ನಾನು ಪಾಲಿಸುತ್ತೇನೆ, ಆರ್ ಎಸ್ ಎಸ್ ಕೂಡ ರಾಷ್ಟ್ರೀಯತೆಯನ್ನೇ ಪ್ರತಿಪಾದಿಸುತ್ತದೆ, ಅದೇನೆ ಇರಲಿ ಸಿದ್ದರಾಮಯ್ಯ ಅವರೇ, ನೀವು ಜೀವನ ಪರ್ಯಂತ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದೀರಿ, ಈಗ ಒಂದು ಕುಟುಂಬದ ಹಿನ್ನೆಲೆ ಗಾಯಕರಾಗಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ.

More News

You cannot copy content of this page