ಹಾಲಿ – ಮಾಜಿ ಸಿಎಂ ಭೇಟಿ : ಹಬ್ಬದ ಶುಭಾಷಯ ವಿನಿಮಯ, ಪ್ರಸಕ್ತ ರಾಜಕೀಯ ವಿದ್ಯಮಾನ ಚರ್ಚೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿದರು. ಉಭಯ ನಾಯಕರು ವಿಜಯದಶಮಿ ಹಬ್ಬದ ಶುಭಾಶಯ ಕೋರಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸ ಕಾವೇರಿಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ದಸರಾ ಮತ್ತು ವಿಜಯದಶಮಿ ಹಬ್ಬ ತಮಗೆ ಶುಭ ತರಲಿ ಎಂದು ಯಡಿಯೂರಪ್ಪ ಅವರಿಗೆ ಶುಭ ಕೋರಿದರು. ಸುಮಾರು ಅರ್ಧಗಂಟೆ ಕಾಲ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದರು ಎನ್ನಲಾಗಿದೆ.

ಬಿ ಲ್ ಸಂತೋಷ್- ಮಾಜಿ ಸಿಎಂ ಭೇಟಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್ ಸಂತೋಷ್ ಅವರು ಕೂಡ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭೇಟಿ ಮಾಡಿ ಹಬ್ಬದ ಶುಭಾಶಯ ಕೋರಿದರು.

ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು. ನಿನ್ನೆ ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ರವರನ್ನು ಭೇಟಿ ಮಾಡಿದ್ದರು. ಈಎಲ್ಲಾ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲಕ್ಕೆಡೆ ಮಾಡಿದೆ.

More News

You cannot copy content of this page