ಮೈಶುಗರ್ ಕಾರ್ಖಾನೆಯ ಆರಂಭ ಕುರಿತು ಶೀಘ್ರವೇ ರೈತರೊಂದಿಗೆ ಸಭೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಂಡ್ಯ : ಮಂಡ್ಯ ರೈತ ಹಿತರಕ್ಷಣಾ ಸಮಿತಿ ವತಿಯಿಂದ ಮಂಡ್ಯ ನಗರದಲ್ಲಿ ಹಮ್ಮಿಕೊಂಡಿದ್ದ ರೈತರ ಪ್ರತಿಭಟನಾ ಸ್ಥಳಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡಿದರು.

ಅಲ್ಲಿ ರೈತ ಮುಖಂಡರಿಂದ ಅಹವಾಲು ಸ್ವೀಕರಿಸಿದರು.

ನಂತರ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರ ಸಮಸ್ಯೆಗಳನ್ನು ಆಲಿಸಿ ಮೈಶುಗರ್ ಕಾರ್ಖಾನೆಯ ಕುರಿತಂತೆ ಶೀಘ್ರವೇ ಸಭೆ ನಡೆಸಲಾಗುವುದು. ಈ ಸಭೆಗೆ ಹಾಜರಾಗುವಂತೆ ರೈತ ಮುಖಂಡರಿಗೆ ಆಹ್ವಾನ ನೀಡಿದರು.

ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು  ದಿನಗಳವರೆಗೆ ವಿಸ್ತರಣೆ

ಮೈಸೂರು: ಮೈಸೂರು ನಗರದ ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು  ದಿನಗಳವರೆಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು.

ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಿನ ವಿವಿಧ ಕಡೆಗಳಿಂದ ಪ್ರವಾಸಿಗರು ದೊಡ್ಡ ಪ್ರಮಾಣದಲ್ಲಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಜನಪ್ರತಿನಿಧಿಗಳು ಮತ್ತು ಜನತೆಯ ಬೇಡಿಕೆಯ ಮೇರೆಗೆ ವಿದ್ಯುತ್ ದೀಪಾಲಂಕಾರವನ್ನು ವಿಸ್ತರಿಸುತ್ತಿರುವುದಾಗಿ ತಿಳಿಸಿದರು.

ಅಕ್ಟೋಬರ್ .17 ರಿಂದ ಹಾನಗಲ್ ನಲ್ಲಿ  ಪ್ರಚಾರ

ಉಪಚುನಾವಣೆ ಪ್ರಯುಕ್ತ  ಅಕ್ಟೋಬರ್ 17 ರಿಂದ ಹಾನಗಲ್ ತೆರಳಿ  ಪ್ರಚಾರ  ಕೈಗೊಳ್ಳಲಾಗುವುದು, ನಂತರ ಸಿಂಧಗಿಯಲ್ಲಿ2 ದಿನಗಳ ಪ್ರಚಾರ ಮಾಡಲಾಗುವುದು ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.     

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 21 ರ ನಂತರ  ಹಾನಗಲ್ ಮತ್ತು ಸಿಂಧಗಿಯಲ್ಲಿ  ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ ಎಂದು ವಿವರಿಸಿದರು. ಮಾಸಾಲಾ ಜಯರಾಂ ಅವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅವರು ನನ್ನ ಒಳ್ಳೆಯ ಸ್ನೇಹಿತರು ಎಂದು ಸೂಚ್ಯವಾಗಿ ಹೇಳಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು  ತಮ್ಮನ್ನು  ಭೇಟಿಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.  ಇದೇ ವೇಳೆ ಮುಖ್ಯಮಂತ್ರಿಗಳು ನಾಡಿನ ಜನತೆಗೆ ದಸರಾ  ಹಬ್ಬದ ಶುಭಾಶಯಗಳನ್ನು ಕೋರಿದರು.

More News

You cannot copy content of this page