ಹುಬ್ಬಳ್ಳಿ : ಚಿಂತಕ, ಕನ್ನಡದ ಹಿರಿಯ ನಟ ಪ್ರೊಫೆಸರ್ ಜಿ ಕೆ ಗೋವಿಂದರಾವ್ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಗೋವಿಂದರಾವ್ ಅವರು, ಕಳೆದ ಕೆಲವು ದಿನಗಳಿಂದ ಅನಾರೋಗದ ಹಿನ್ನೆಲೆಯಲ್ಲಿ ಆಸ್ಪತ್ರೆ ದಾಖಲಾಗಿದ್ದು, ಮುಂಜಾನೆ ಸುಮಾರು 5ಗಂಟೆಯ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಪ್ರಾಧ್ಯಾಪಕರಾಗಿ, ಲೇಖಕರಾಗಿ, ರಂಗಭೂಮಿ ಕಲಾವಿದರಾಗಿ, ಕನ್ನಡ ಚಲನಚಿತ್ರ ನಟರಾಗಿ ಅವರು ಗುರುತಿಸಿಕೊಂಡಿದ್ದರು. ಹುಬ್ಬಳ್ಳಿಯ ಮುಕ್ತಿನಗರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಮಾಲ್ಗುಡಿ ಡೇಸ್, ಮಹಾಪರ್ವ ಸೇರಿದಂತೆ ಅನೇಕ ಧಾರವಾಹಿಗಳಲ್ಲಿ, ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. ಪ್ರೋಫೆಸರ್ ಜಿ ಕೆ ಗೋವಿಂದರಾವ್ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೋಕ ಸಂದೇಶ
ಕನ್ನಡದ ಹಿರಿಯ ನಟ, ಚಿಂತಕ, ಪ್ರೊ.ಜಿ.ಕೆ ಗೋವಿಂದ ರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಂಗಭೂಮಿ, ಸಿನಿಮಾ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದ ಅವರು, ತಮ್ಮ ಜನಪರ ನಿಲುವಿನಿಂದ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದರು ಎಂದು ತಿಳಿಸಿದ್ದಾರೆ.
ಅವರ ನಿಧನದಿಂದ ಒಬ್ಬ ಅನನ್ಯ ಚಿಂತಕನನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರ ಶೋಕ ಸಂದೇಶ
ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ. ಜಿ ಕೆ ಗೋವಿಂದರಾವ್ ಅವರಿಗೆ ಗೌರವದ ನಮನಗಳು,

ಅವರನ್ನು ಕಳೆದುಕೊಂಡ ಕುಟುಂಬದಸದಸ್ಯರು, ಶಿಷ್ಯರು ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಸಂದೇಶ ನೀಡಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರ ಶೋಕ ಸಂದೇಶ
ವಿಪಕ್ಷ ನಾಯಕ ಸಿದ್ದರಾಮಯ್ಯ ಜಿ.ಕೆ.ಗೋವಿಂದರಾವ್ ನಿಧನದ ಸುದ್ದಿಗೆ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದು, ‘‘ಹಿರಿಯ ಲೇಖಕ, ಚಿಂತಕ, ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.

ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು.ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ.’’ ಎಂದು ಸಂತಾಪ ಸೂಚಿಸಿದ್ಧಾರೆ.