ದಾವಣಗೆರೆ : ಕೊರೊನಾ ಕಾರಣ ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಇಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಜಿಲ್ಲೆಯ ನ್ಯಾಮತಿ ತಾಲ್ಲೂಕು ಸುರಹೊನ್ನೆ ಗ್ರಾಮದಲ್ಲಿ ಚಾಲನೆ ನೀಡಿದರು.

ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಇಂದಿಗೂ ಪ್ರಸ್ತುತ. ಭಾರತದಂತಹ ಅಭಿವೃದ್ಧಿಶೀಲ ದೇಶಗಳ ಆರ್ಥಿಕ ಸ್ವಾವಲಂಬನೆಗೆ ಗ್ರಾಮ ಸ್ವರಾಜ್ಯ ಪರಿಕಲ್ಪನೆ ಅತ್ಯಗತ್ಯ. ಇದರ ಜೊತೆಗೆ ಸರ್ಕಾರವನ್ನು ಹಳ್ಳಿಗಳತ್ತ, ಜನರ ಮನೆ ಬಾಗಿಲಿಗೆ ಕೊಂಡೊಯ್ದು,

ಅವರ ಸಮಸ್ಯೆಗೆ ಸ್ಥಳೀಯವಾಗಿಯೇ ಪರಿಹಾರ ಕಂಡುಕೊಳ್ಳುವಂತಾಗಲು ಕಂದಾಯ ಸಚಿವರಾದ ಆರ್ ಅಶೋಕ್ ಅವರು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ಕಡೆ ಎಂಬ ವಿನೂತನ ಕಾರ್ಯಕ್ರಮ ಪ್ರಾರಂಭಿಸಿ, ಯಶಸ್ವಿಯಾಗಿ ನೆರವೇರಿಸಲಾಗಿದೆ. ಆದರೆ ಕೊರೊನಾ ಹಿನ್ನೆಲೆ ಗ್ರಾಮ ವಾಸ್ತವ್ಯಕ್ಕೆ ಹಿನ್ನೆಡೆಯಾಗಿತ್ತು. ಇದೀಗ ಮತ್ತೆ ಗ್ರಾಮ ವಾಸ್ತವ್ಯಕ್ಕೆ ಕಾಲ ಕೂಡಿ ಬಂದಿದೆ ಎಂದರು.
ಮುಖ್ಯಮಂತ್ರಿ ಗಳಾದ ಬಸವರಾಜ ಬೊಮ್ಮಾಯಿ ಅವರೇ ಖುದ್ದು ಭಾಗವಹಿಸಿ ಪುನಃ ಈ ಕಾರ್ಯಕ್ರಮಕ್ಕೆ ದಾವಣಗೆರೆ ಜಿಲ್ಲೆಯಲ್ಲಿ ಚಾಲನೆ ನೀಡಿರುವುದು ವಿಶೇಷವಾಗಿದೆ.