ಮುಂದಿನ ವರ್ಷ ಅದ್ದೂರಿ ದಸರಾ ಆಚರಣೆಗೆ ಚಿಂತನೆ: ಸಿ.ಎಂ

ಮೈಸೂರು: ಮೈಸೂರಿನ ವಸ್ತುಪ್ರದರ್ಶನ ಮೈದಾನವನ್ನು ವರ್ಷ ವಿಡೀ ಉಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಶಾಶ್ವತ ವಸ್ತು ಪ್ರದರ್ಶನ ಆಯೋಜಿಸುವುದರ ಬಗ್ಗೆ ಯೋಜನೆ ರೂಪಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಪ್ರವಾಸೋದ್ಯಮ ಸರ್ಕಿಟ್ ರೂಪಿಸಲು ಸಮಗ್ರ ಚಿಂತನೆ ನಡೆಸಲಾಗಿದೆ. ಈ ಸಂಬಂಧ ನಿರ್ಣಯವೊಂದನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿಗಳು, ಉತ್ತಮ ರೀತಿಯಲ್ಲಿ ದಸರಾ ನಡೆಸಿಕೊಟ್ಟ ಮೈಸೂರಿನ ಜನತೆಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದರು. ಮುಂಬರುವ ವರ್ಷಗಳಲ್ಲಿ ಪರಿಸ್ಥಿತಿ ಉತ್ತಮಗೊಂಡರೆ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.
ಸಿಂಧಗಿ ಮತ್ತು ಹಾನಗಲ್ ಉಪಚುನಾವಣೆ ಸಂಬಂದ ನಾಲ್ಕು ದಿನಗಳ ಪ್ರಚಾರಕ್ಕೆ ತೆರಳುವುದಾಗಿ ತಿಳಿಸಿದ ಅವರು, ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

More News

You cannot copy content of this page