ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇತ್ತೀಚಗೆ ಆರ್ ಎಸ್ಎಸ್ ಸಂಘಟನೆ ಬಗ್ಗೆ ಆಕ್ಷೇಪ ಮತ್ತು ಟೀಕೆಗಳ ಸುರಿಮಳೆಗೈದಿದ್ದರು.ಅದರ ಬೆನ್ನಲ್ಲೇ ಜೆಡಿಎಸ್ ಪಕ್ಷವು ಸಂಘಪರಿವಾರವನ್ನು ತರಾಟೆ ತೆಗೆದುಕೊಂಡಿದೆ.ಇದು ಸರಣಿ ಟ್ವೀಟ್ ಮಾಡಿ ಸ್ವಯಂ ಘೋಷಿತ ಸೇವಾ ಸಂಘಟನೆಯ ಕಾರ್ಯ ವೈಖರಿಯನ್ನು ತೀವ್ರ ಖಂಡಿಸಿದೆ.
ದಾಸರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡು ತ್ತಿದೆ ಎಂದು ಆರೋಪಿಸಿದ ಜೆಡಿಎಸ್,ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಹಾಗೂ ಅವರ ಹಿಂದೆ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದ ವರು ಎಂದು ಪ್ರಶ್ನಿಸಿದೆ.ಸಚಿವರನ್ನು ಶಿಖಾಮಣಿ ಎಂದು ಹೇಳುವ ಮೂಲಕ ಮತ್ತೊಂದು ರಾಜಕೀಯ ರದ್ದಾಂತಕ್ಕೆ ಕಾರಣವಾಗಿದೆ.
ಜೆಡಿಎಸ್ ರಾಜ್ಯ ಘಟಕ ಟ್ವೀಟ್ ಮಾಡಿರುವ ವಿವರ ಇಲ್ಲಿದೆ.
ಸ್ವಯಂ ಘೋಷಿತ ಸೇವಾ ಸಂಸ್ಥೆ ಅರ್ ಎಸ್ ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಎತ್ತಿದ ಪ್ರಶ್ನೆಗ ಳಿಗೆ ಉತ್ತರ ಹೇಳುವ ಬದಲು ಸತ್ಯವ್ನನು ಮರೆಮಾಚುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದೆ.
ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡು ತ್ತಿದೆ.”ಆಚಾರವಿಲ್ಲದ ನಾಲಿಗೆ,ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ” ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರ ವನ್ನು ಸಾರುತ್ತಿದೆ ಎಂದು ಟ್ವೀಟ್ ನಲ್ಲಿ ಟೀಕಿಸಿದೆ.

ಹೇಳುವುದು ಆಚಾರ,ಮಾಡುವುದು ಅನಾಚಾರ.ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ.ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು? ಎಂದು ಸರಣಿ ಪ್ರಶ್ನೆಗಳನ್ನು ಕೇಳಿದೆ.
ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀ ನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕ ರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾ ಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ,ನಿತ್ಯದ ದಿನಚರಿ ಮತ್ತು ಚಾಳಿ ಎಂದು ಬಿಜೆಪಿ ನಾಯಕರ ರಾಸಲೀಲೆ,ಭ್ರಷ್ಟಾಚಾರದಲ್ಲಿ ಸಿಲುಕಿದವರನ್ನು ಛೇಡಿಸಿದೆ.

ಎಚ್.ಡಿ.ಕುಮಾರಸ್ವಾಮಿ ಅವರು ಆರ್ ಎಸ್ ಎಸ್ ತರಬೇತಿ ನೀಡಿದ ಅಧಿಕಾರಿಗಳ ಬಗ್ಗೆ ಹೇಳಿದ್ದರೆ,ನೀವು ಯುಪಿಎಸ್ ಸಿ ಗೆ ಸಮೀಕರಣ ಮಾಡಿ ಕೆಪಿಎಸ್ ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದ್ದೀರಿ.ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆಪಿಎಸ್ ಸಿ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಎಂದು ಕೇಳುವ ಮೂಲಕ ಕೆಸರೆರಚಾಟ ನಡೆಸಿದ್ದಾರೆ.




