ಅಲ್ಪಸಂಖ್ಯಾತರ ಓಲೈಕೆಗಾಗಿ ಆರ್ ಎಸ್ ಎಸ್ ವಿರುದ್ಧ ಕಾಂಗ್ರೆಸ್ ಟೀಕೆ : ಯಶಸ್ಸು ಕಾಣಲ್ಲ – ಸಿಎಂ

ಹಾನಗಲ್ : ಅಲ್ಪಸಂಖ್ಯಾತ ಸಮುದಾಯದ ಮತದಾರರನ್ನು ಓಲೈಸಲು ಕಾಂಗ್ರೆಸ್ ಪಕ್ಷದ ನಾಯಕರು ಆರ್ ಎಸ್ ಎಸ್  ಗುರಿಯಾಗಿಟ್ಟುಕೊಂಡು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಆದರೆ ಆ ಪ್ರಯತ್ನದಲ್ಲಿ ಅವರು ಯಶಸ್ವಿ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಹಾನಗಲ್ ತಾಲೂಕಿನ ನರೇಗಲ್ಲ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ವಿರಕ್ತ ಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರಿಗೆ ಬೇರೆ ವಿಷಯಗಳು ಸಿಗುತ್ತಿಲ್ಲ. ಹೀಗಾಗಿ ಆರ್ ಎಸ್ ಎಸ್ ಸಂಘಟನೆಯನ್ನು ಪ್ರಚಾರದಲ್ಲಿ ಎಳೆದು ತರುತ್ತಿದ್ದಾರೆ ಎಂದರು.

ಆರ್ ಎಸ್ ಎಸ್ ಸಂಘಟನೆಯನ್ನು ಟೀಕಿಸಿದರೆ ಅಲ್ಪಸಂಖ್ಯಾತರ ಮತಗಳನ್ನು ಪಡೆಯಬಹುದು ಎಂಬ ಕಾರಣದಿಂದ ಈ ರೀತಿಯ ಹೇಳಿಕೆಯನ್ನು ನೀಡುತ್ತಿದ್ದಾರೆ. ಆದರೆ ಈ ಪ್ರಯತ್ನದಲ್ಲಿ  ಅವರು ಯಶಸ್ವಿ ಆಗುವುದಿಲ್ಲ ಎಂದರು.

ತಮ್ಮ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಬಗ್ಗೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಗಳು ಸಣ್ಣತನದಿಂದ ಕೊಡುವೆ. ಹಾಗಾಗಿ ಅಂತ ಸಣ್ಣತನದ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಬೊಮ್ಮಾಯಿ ತಿಳಿಸಿದರು.

ಅವರ ಸಣ್ಣತನದ ಹೇಳಿಕೆಗಳು ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ.  ಹಾನಗಲ್ ಕ್ಷೇತ್ರದ ಜನರ ವಿಶ್ವಾಸ ನಮ್ಮ ಮೇಲಿದೆ ಎಂದರು. ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ  ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.

More News

You cannot copy content of this page