ಬೆಂಗಳೂರು : ಪೊಲೀಸ್ ಇಲಾಖೆಯ ಅಭಿವೃದ್ಧಿ ಹಾಗೂ ಪೊಲೀಸ್ ಸಿಬ್ಬಂದಿಗಳ ಕ್ಷೇಮಾಭಿವೃದ್ದಿ, ನಮ್ಮ ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಬೆಂಗಳೂರಿನ ಸಿ ಎ ಅರ್ ಮೈದಾನದಲ್ಲಿ ಇಂದು ನಡೆದ ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೃಹ ಸಚಿವ ಮಾತನಾಡಿದರು. ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಗೌರವ ಅರ್ಪಣೆ ಮಾಡಿದ ಗೃಹ ಸಚಿವರು, ಹುತಾತ್ಮ ಪೊಲೀಸರಿಗೆ ಭಾವಪೂರ್ಣ ಶ್ರಧ್ದಾಂಜಲಿ ಅರ್ಪಿಸಿ, ಮಾತನಾಡಿದರು.

ಸಾಮಾಜಿಕ ಸೇವೆ ಸಲ್ಲಿಸುತ್ತಾ ಶೌರ್ಯತೆ ಮೆರೆದು ಹುತಾತ್ಮರಾದ ವೀರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ತಂದೆ, ತಾಯಿಯವರಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ನನ್ನ ಹೃದಯ ಪೂರ್ವಕ ವಂದನೆಗಳು ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಕುಮಾರ್ ಸೂದ್, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಒಳಗೊಂಡಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.