ಹುಬ್ಬಳ್ಳಿ : ಪೊಲೀಸರು ಸಾರ್ವಜನಿಕರೊಂದಿಗೆ ಶಿಸ್ತು, ಸಂಯಮದಿಂದ ವರ್ತಿಸಬೇಕು, ಸಮಾಜದಲ್ಲಿ ಅಶಾಂತಿ ಸೃಷ್ಠಿಸುವವರ ವಿರುದ್ಧ ಎಚ್ಚರವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಕರೆನೀಡಿದರು.
ಅವರು ಇಂದು ಹುಬ್ಬಳ್ಳಿಯ ಸಿಎಆರ್ ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣಾ ಅಂಗವಾಗಿ, ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಗೌರವವನ್ನು ಅರ್ಪಿಸಿದರು. ಹುತಾತ್ಮ ಪೊಲೀಸರಿಗೆ ಭಾವಪೂರ್ಣ ಶ್ರಧ್ದಾಂಜಲಿ ಸಲ್ಲಿಸಿದರು.

ಹಿರಿಯ ಪೊಲೀಸ್ ಅಧಿಕಾರಿಗಳಿಂದ ತರಬೇತಿ ನೀಡುವ ಕಾರ್ಯಕ್ರಮವನ್ನು ಯೋಜಿಸಲಾಗಿದೆ ಹಾಗೆಯೇ ಮಹಿಳಾ ಪೊಲೀಸರಿಗೆ ಸೂಕ್ತ ರೀತಿಯ ತರಬೇತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕ ಪ್ರಸಾದ ಅಬ್ಬಯ್ಯ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ ರೆಡ್ಡಿ, ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್ ಉಪಸ್ಥಿತರಿದ್ದರು