ಕಾಂಗ್ರೆಸ್ ಅಡ್ರೆಸ್ ಪಕ್ಕಕ್ಕಿರಲಿ,ಮೊದಲು ಯಡಿ ಯೂರಪ್ಪ ಅವರು ಅಡ್ರೆಸ್ ಹುಡುಕಿ ಕೊಳ್ಳಲಿ : ಮಾಜಿ ಸಿಎಂಗೆ ಡಿ.ಕೆ.ಶಿವಕುಮಾರ್ ಪ್ರತಿಸವಾಲು

ಸಿಂಧಗಿ : ಉಪ ಚುನಾವಣೆ ಎರಡು ವಿಚಾರಗಳ ಮೇಲೆ ನಡೆಯುತ್ತಿದೆ.ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಬಂದು 2 ವರ್ಷವಾ ಯಿತು.ಅವರು ಹೇಳಿದಂತೆ ರೈತರ ಆದಾಯ ಡಬಲ್ ಮಾಡಿದ್ದಾರಾ? ಹಾಗೂ ಕೋವಿಡ್ ಸಮಯದಲ್ಲಿ ಘೋಷಿಸಿದ ಪರಿಹಾರ ಪ್ಯಾಕೇಜ್ ಜನರಿಗೆ ತಲುಪಿದೆ ಯಾ? ಎಂಬುದಷ್ಟೇ ಇಲ್ಲಿ ಮುಖ್ಯ.ಜನ ಇದನ್ನು ನೋಡಿ ನಂತರ ಮತ ಹಾಕುತ್ತಾರೆ.ಇದನ್ನು ಹೊರ ತುಪಡಿಸಿ ಯಾವ ಪಕ್ಷ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ ಎಂಬುದು ಮುಖ್ಯವಲ್ಲ.

ಸಿಂಧಗಿಯಲ್ಲಿ ಅಭ್ಯರ್ಥಿಪರ ಪ್ರಚಾರಕ್ಕೆ ಆಗಮಿಸಿದಾಗ ಸುದ್ದಿಗಾರರೊಂದಿಗೆ ಮಾತನಾಡಿದರು.ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 140 ಸೀಟು ಗೆಲ್ಲಿಸಿ ಮತ್ತೆ ಅಧಿಕಾರಕ್ಕೆ ತರುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,ಬಹಳ ಸಂತೋಷ,ಇನ್ನುಳಿದ ಕ್ಷೇತ್ರಗಳ ನ್ನು ಅವರು ಯಾಕೆ ಬಿಟ್ಟಿದ್ದಾರೆ? ಯಡಿಯೂರಪ್ಪನವರು.ಗುರಿ 140 ಸೀಟುಗಳಾ ದರೆ,ನನ್ನ ಗುರಿ 224 ಸೀಟು ಎಂದು ತಿರುಗೇಟು ನೀಡಿದರು.

ಯಡಿಯೂರಪ್ಪನವರಿಗೆ ಅವರ ನೋವು ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ.ಕಣ್ಣೀರು ಯಾಕೆ ಬರುತ್ತದೆ ಹೇಳಿ.ಯಾರಿಗೆ ನೋವಾಗಿ ರುತ್ತದೆಯೋ ಅವರಿಗೆ ಕಣ್ಣೀರು ಬರುತ್ತದೆ.ಯಡಿಯೂರಪ್ಪನವರು ರಾಜ್ಯಪಾಲ ರಿಗೆ ರಾಜೀನಾಮೆ ನೀಡುವಾಗ ಹಾಕಿದ ಕಣ್ಣೀರ ಲ್ಲೇ ಈ ಬಿಜೆಪಿ ಪಕ್ಷ ಹಾಗೂ ಅದರ ಸರ್ಕಾರ ಕೊಚ್ಚಿಹೋಗಲಿದೆ  ಎಂದು ಅವರು ಲೇವಡಿ ಮಾಡಿದರು.

ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಜನರೇ ಅದನ್ನು ವಿಸರ್ಜನೆ ಮಾಡಲಿದ್ದು,ವಿಳಾಸ ಹುಡುಕುವಂ ತಾಗಿದೆ ಎಂಬ ಯಡಿಯೂ ರಪ್ಪನವರ ಹೇಳಿಕೆಗೆ ತಿರುಗೇಟು ಕೊಟ್ಟ ಅವರು,ಕಾಂಗ್ರೆಸ್ ಅಡ್ರೆಸ್ ಪಕ್ಕಕ್ಕಿರಲಿ, ಈಗ ಬಿಜೆಪಿಯವರು ಯಡಿಯೂರಪ್ಪನವರಿಗೆ ಏನಾದರೂ ವಿಳಾಸ ಕೊಟ್ಟಿದ್ದಾರಾ? ಅವರ ವಿಳಾಸ ಏನು ಎಂದು ಮೊದಲು ಹುಡುಕಿಕೊಳ್ಳಲಿ,ಅದನ್ನು ಅವರು ಅರ್ಥ ಮಾಡಿ ಕೊಳ್ಳಲಿ’ಎಂದು ಛೇಡಿಸಿದರು.

ರಾಜಾಹುಲಿ ಯಡಿಯೂರಪ್ಪನವರ ಜತೆ ಮತ್ತೊಂದು ಹುಲಿ ಬೊಮ್ಮಾಯಿ ಸೇರಿದ್ದಾರೆ.ಈಗ ಕಾಂಗ್ರೆಸ್ ನವರು ಇಲಿಗಳಾಗಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಮಾರ್ಮಿಕವಾಗಿ ಉತ್ತರಿಸಿದ ಅವರು, ‘ಇಲಿಯೇ ಅಲ್ಲವೇ ಗಣಪತಿಯನ್ನು ಹೊತ್ತು ತಿರುಗು ವುದು ಎಂದು ಚಟಾಕಿ ಹಾರಿಸಿದರು.

More News

You cannot copy content of this page