ಬೆಂಗಳೂರು : ಬಾಂಗ್ಲಾದೇಶದಲ್ಲಿರುವ ಭಾರತೀಯ ದೇಗುಲವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವುದನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.
ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಾಂಗ್ಲಾ ಸರ್ಕಾರದ ಮೇಲೆ ಒತ್ತಡ ತರುವಂತೆ ಕೇಂದ್ರ ಸರ್ಕಾರ ಮುಂದಾಗಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಹಾಗೆಯೇ ಬಾಂಗ್ಲಾದಲ್ಲಿರುವ ಭಾರತೀಯರಿಗೆ ರಕ್ಷಣೆ ನೀಡಬೇಕು, ಇನ್ನುಳಿದ ಹಿಂದೂ ದೇಗುಲಗಳ ರಕ್ಷಣೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವದ ಮುಂದೆ ನಡೆದ ಪ್ರತಿಭಟನೆಯಲ್ಲಿ ಅಲ್ಲಿರುವ ಹಿಂದೂಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.




