ಲಖನೌ : ಭಾನುವಾರ ನಡೆದ ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಅನುಭವಿಸಿತ್ತು. ಈ ಸಂದರ್ಭದಲ್ಲಿ ಅನೇಕರು ಪಾಕಿಸ್ತಾನದ ಗೆಲುವುವನ್ನು ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಈ ಸಂಭ್ರಮಾಚರಣೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರವಾಗಿ ಖಂಡಿಸಿದ್ದು, ಸಂಭ್ರಮಾಚರಣೆ ಮಾಡಿದರೆ ಅಂತಹವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಟ್ವೀಟ್ ಮೂಲಕ ಎಚ್ಚರಿಕೆ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ಅಕ್ಟೋಬರ್ 24ರ ಪಂದ್ಯದ ನಂತರ ದೇಶದ ವಿರುದ್ಧ ಟೀಕೆ ಮಾಡಿರುವ ಕಾರಣಕ್ಕಾಗಿ ಆಗ್ರಾ, ಬರೇಲಿ ಸೇರಿದಂತೆ ವಿವಿಧಜಿಲ್ಲೆಗಳಲ್ಲಿ 7 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಉತ್ತರಪ್ರದೇಶ ಪೊಲೀಸರು ತಿಳಿಸಿದ್ದಾರೆ.
ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯ ಪ್ರಾಧ್ಯಾಪಕ ಹಾಗೂ ಉತ್ತರ ಪ್ರದೇಶದ ಓದುತ್ತಿರುವ ಕಾಶ್ಮೀರದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.




