ಪುನೀತ್ ರಾಜ್ ಕುಮಾರ್ ಅವರ ಮೃತದೇಹವನ್ನು ಅವರ ಮನೆಯಿಂದ ಸಾರ್ವಜನಿಕರ ದರ್ಶನಕ್ಕಾಗಿ ಕಂಠೀರವ ಕ್ರೀಡಾಂಗಣದಲ್ಲಿ ಇಡಲಾಗಿದೆ.
ಇಲ್ಲಿ ಇಂದು ಮತ್ತು ನಾಳೆ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದ್ದು, ನಾಡಿದ್ದು ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

ಕಂಠೀರವ ಕ್ರೀಡಾಂಗಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಅಪಾರ ಪ್ರಮಾಣದಲ್ಲಿ ಅವರ ಬೆಂಬಲಿಗರು ನೆರೆದಿದ್ದು, ತಮ್ಮ ನೆಚ್ಚಿನ ನಾಯಕನ ಅಂತಿಮ ದರ್ಶನಕ್ಕಾಗಿ ಕಾಯುತ್ತಿದ್ದಾರೆ.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಸಚಿವ ಸಂಪುಟದ ಸಹದ್ಯೋಗಿಗಳು ಕಂಠೀರವ ಕ್ರೀಡಾಂಗಣಕ್ಕೆ ತೆರಳಿ, ಅಂತಿಮ ದರ್ಶನಪಡೆದರು.




