ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಪಡೆಯಲು ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಂಠೀರವ ಸ್ಟೇಡಿಯಂಗೆ ಹೆಚ್ಚಿನ ಅಂಬ್ಯುಲೆನ್ಸ್ ಗಳನ್ನು ಕರೆಸಲಾಗಿದೆ.
ಬೆಳಗ್ಗೆಯಿಂದ ಇದುವರೆಗೂ ಇಬ್ಬರು ಅಭಿಮಾನಿಗಳು ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈಗ ಅಂತ್ಯಕ್ರಿಯೆ ನಾಳೆಗೆ ಮೂಂದೂಡಿದ ಹಿನ್ನಲೆಯಲ್ಲಿ ಹಾಗೂ ಅಭಿಮಾನಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಈಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಅಂಬ್ಯುಲೆನ್ಸ್ ಸಂಖ್ಯೆ ಹೆಚ್ಚುತ್ತಿದ್ದರೆ, ಇನ್ನೊಂದೆಡೆ ಪೊಲೀಸರ ಸಂಖ್ಯೆ ಹೆಚ್ಚುತ್ತಿದೆ. ಸೂಕ್ತ ಬಂದೋಬಸ್ತ್ ಗಾಗಿ ಈ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.




