T-20 TOURNMENT: ಭಾರತದಲ್ಲೇ ಟಿ-20 ಕ್ರಿಕೆಟ್ ಟೂರ್ನಿ: BCCI ಸೌರವ್ ಗಂಗೂಲಿ

ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ (IPL) 2022 ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯನ್ನು ಭಾರತದಲ್ಲಿಯೇ ಆಯೋಜಿಸಲಾಗುವುದು ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದಾರೆ.
ಕಳೆದ ಬಾರಿ ಕೊರೊನಾ ಪ್ರಕರಣಗಳು ಹೆಚ್ಚಾದ ಕಾರಣ ವಿದೇಶದಲ್ಲಿ ಟೂರ್ನಿಯನ್ನು ಆಯೋಜಿಸಲಾಗಿತ್ತು, ಈ ಬಾರಿ ಯಾವುದೇ ಕಾರಣಕ್ಕೂ ವಿದೇಶದಲ್ಲಿ ಪಂದ್ಯಗಳನ್ನು ಆಯೋಜಿಸುತ್ತಿಲ್ಲ, ಕೊರೊನಾ ಗಂಭೀರಗೊಂಡಾಗ ಮಾತ್ರ ಮುಂದೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸೌರವ್ ಗಂಗೂಲಿ ತಿಳಿಸಿದ್ದಾರೆ.

ಮುಂಬೈ ಮತ್ತು ಪುಣೆಯಲ್ಲಿ ಐಪಿಎಲ್ ನ ಲೀಗ್ ಹಂತದ ಪಂದ್ಯಗಳನ್ನು ನಡೆಸವು ಯೋಚಿಸಲಾಗುತ್ತಿದೆ, ನಾಕೌಟ್ ಹಂತದ ಪಂದ್ಯಗಳು ಮುಗಿದ ಬಳಿಕ ಮುಂದಿನ ಪಂದ್ಯಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸೌರವ್ ಗಂಗೂಲಿ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

More News

You cannot copy content of this page