ಯುಕ್ರೇನ್ ನಲ್ಲಿ ಶೆಲ್ ದಾಳಿ ನಿಂತ ನಂತರ ನವೀನ್ ಮೃತ ದೇಹ ತರುವ ಕ್ರಮ: ಸಿಎಂ

ಬೆಂಗಳೂರು: ಯೂಕ್ರೇನ್ ನಲ್ಲಿ ಹಾವೇರಿ ಮೂಲದ ನವೀನ್ ಗ್ಯಾನಗೌಡರ್ ಮೃತದೇಹವನ್ನ ಅಲ್ಲಿ ನಡೆಯುತ್ತಿರುವ ಶೆಲ್ ದಾಳಿ ನಿಂತ ನಂತರ ತರುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನವೀನ್ ವಿಚಾರ ಕೇಂದ್ರ ಸಚಿವ ಜೈಶಂಕರ್ ಅವರ ಜತೆ ಹಲವು ಬಾರಿ ಮಾತಾಡಿದ್ದೇನೆ, ನವೀನ್ ಮೃತದೇಹ ಸಿಕ್ಕಿದೆ. ಉಕ್ರೇನಿನ‌ ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ. ಅಲ್ಲಿ ಯುದ್ಧ ಇನ್ನೂ ನಡೀತಿದೆ, ರಾಯಭಾರಿ ಕಚೇರಿ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇವೆ. ಮೃತದೇಹ ತರುವ ಬಗ್ಗೆ ಮಾತುಕತೆ ನಡೆಸುತ್ತಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ಪಂಚರಾಜ್ಯಗಳ ಚುನಾವಣೆ ಎಕ್ಸಿಟ್ ಫಲಿತಾಂಶ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಗಳಿಸುವುದು ಚುನಾವಣೆ ವೇಳೆಯೇ ನಿರೀಕ್ಷೆ ಇತ್ತು ಎಂದರು.

ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರಗಳಲ್ಲಿ ಜಯ ಸಾಧಿಸುವುದು ಗೊತ್ತಾಗಿತ್ತು. ಆ ನಿರೀಕ್ಷೆಗೆ ತಕ್ಕಂತೆ ಎಕ್ಸಿಟ್ ಪೋಲ್ ಸಹ ಬಂದಿದೆ, ಇನ್ನೂ ಎರಡು ದಿನ ಕಾದು ನೋಡೋಣ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

More News