ಕಲಬುರಗಿ: ಖಾಸಗಿ ಬಸ್ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆಕಲಬುರಗಿ ಜಿಲ್ಲೆಯ ಕಮಲಾಪುರದಲ್ಲಿ ನಡೆದಿದೆ.
ಬಸ್ ನಲ್ಲಿದ್ದವರು ಆಶ್ಚರ್ಯಕರ ರೀತಿಯಲ್ಲಿ ಪಾಲರಾಗಿದ್ದು, ಅಪಘಾತದ ತೀವ್ರತೆಗೆ ಆರೆಂಜ್ ಡಿಲಕ್ಸ್ ಬಸ್ ಗೆ ಬೆಂಕಿ ಹತ್ತಿಕೊಂಡಿದೆ. ಹಲವರು ಬಸ್‌ನಿಂದ ಹೊರಗಡೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ತೆಲಂಗಾಣದ ಹೈದರಾಬಾದ್ ನಿಂದ ಗೋವಾಗೆ ಮೂರು ಕುಟುಂಬಗಳ 29 ಜನರು ಪ್ರವಾಸಕ್ಕೆ ತೆರಳುತ್ತಿದ್ದರು. ಗೋವಾದಿಂದ ಹಿಂದಕ್ಕೆ ಮರಳುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿ ಅಗ್ನಿಶಾಮಕ ದಳ ಹಾಗೂ ಪೊಲೀಸರು ತೆರಳಿ, ಪರಿಹಾರ ಕಾರ್ಯ ಕೈಗೊಂಡಿದ್ದಾರೆ.

ಕಮಲಾಪುರ ಠಾಣಾ ಪೊಲೀಸರು ದೂರು ದಾಖಲಿಸಿ ತನಿಖೆ ಕೈಗೊಂಡಿದ್ದು, ಟೆಂಪೋ ಚಾಲಕನ ಎರಡೂ ಕಾಲುಗಳು ಅಫಘಾತದಲ್ಲಿ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
