ಬೆಳಗಾವಿ: PSI ಪರೀಕ್ಷಾ ಅಕ್ರಮ ಹಗರಣಕ್ಕಿಂತಲೂ ಮಿಗಿಲಾಗಿದ್ದು ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ. ಈ ಅಕ್ರಮ ಬಗೆದಷ್ಟು ಬಯಲಾಗುತ್ತಿದೆ, ಸಾಕಷ್ಟು ಮಾಹಿತಿಗಳು ಬಯಲಾಗಿದ್ದು, ಅನೇಕ ಸಣ್ಣಪುಟ್ಟವರು ಬಂಧಕ್ಕೊಳಗಾಗಿದ್ದಾರೆ.
ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಎಸ್ ಪಿ ಡಾ. ಸಂಜೀವ್ ಪಾಟೀಲ್ ನೇತೃತ್ವದ ತಂಡದಿಂದ ಮೂವರನ್ನು ಬಂಧಿಸಲಾಗಿದೆ.
ಹುಕ್ಕೇರಿಯ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ ಪರೀಕ್ಷಾರ್ಥಿಗಳ ಇಬ್ಬರು ಸಂಬಂಧಿಕರನ್ನು ಪೊಲೀಸರು ಬಂಧಿಸಿದ್ದಾರೆ. ಗದಗದಿಂದ ಬಂದಿದ್ದ ಪ್ರಶ್ನೆಪತ್ರಿಕೆಗೆ ಉತ್ತರ ಬಿಡಿಸಿದ್ದ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಆದೇಶ ನಾಗನೂರಿ, ಬೆಳಗಾವಿ ಜಿಲ್ಲೆಯ ಕಮತನೂರು ನಿವಾಸಿ ಆದೇಶ ನಾಗನೂರಿ, ಬೈಲಹೊಂಗಲ ತಾಲೂಕಿನ ನಾವಲಗಟ್ಟಿಯ ಮಡಿವಾಳಪ್ಪ ತೋರಣಗಟ್ಟಿ, ಹೊಸಕೋಟಿ ಗ್ರಾಮದ ಶಂಕರ ಉಣಕಲ್ ಬಂಧನಕ್ಕೊಳದಾವರಾಗಿದ್ದಾರೆ.

KPTCL ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಇದೀಗ 12ಕ್ಕೇರಿಕೆಯಾಗಿದೆ. ಬಂಧಿತ ಅತಿಥಿ ಉಪನ್ಯಾಸಕನ ಬಳಿ ತಲಾ ಒಂದು ಬ್ಲ್ಯೂಟೂಥ್ ಡಿವೈಸ್ ಪಡೆದಿದ್ದ ಪರೀಕ್ಷಾರ್ಥಿಗಳ ಸಂಬಂಧಿಕರು, ಪರೀಕ್ಷಾರ್ಥಿಗಳ ಸಂಬಂಧಿಕರಾದ ಮಡಿವಾಳಪ್ಪ ತೋರಣಗಟ್ಟಿ, ಶಂಕರ ಉಣಕಲ್, ಆದ್ರೆ ಡಿವೈಸ್‌ಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು ಸಾಧ್ಯವಾಗಿರಲಿಲ್ಲ ಎಂದು ಬಂಧಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಂಧಿತರಿಂದ ಒಂದು ಕಾರು, ಎರಡು ಡಿವೈಸ್‌ಗಳನ್ನು ಜಪ್ತಿ ಮಾಡಲಾಗಿದ್ದು, ಕಿಂಗ್‌ಪಿನ್ ಸಂಜು ಭಂಡಾರಿ ಬಳಿ ಡಿವೈಸ್ ಪಡೆದು ಪರೀಕ್ಷಾರ್ಥಿಗಳ ಸಂಬಂಧಿಕರಿಗೆ ನೀಡಿದ್ದ ಅತಿಥಿ ಉಪನ್ಯಾಸಕರು.

ಆರು ಲಕ್ಷ ರೂಪಾಯಿಗೆ ಡೀಲ್ ಫೈನಲ್ ಮಾಡಿ ಬ್ಲ್ಯೂಟೂಥ್ ಡಿವೈಸ್ ಪಡೆದಿದ್ದ ಪರೀಕ್ಷಾರ್ಥಿಗಳ ಸಂಬಂಧಿಕರು. ಎಸ್‌ಪಿ ಡಾ.ಸಂಜೀವ ಪಾಟೀಲ್ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳಿಂದ ತನಿಖೆ ಮುಂದುವರಿದಿದೆ.