PM & PRESIDENT’S CONDOLENCE : ತುಮಕೂರು ಅಫಘಾತ: ಪ್ರಧಾನಿ – ರಾಷ್ಟ್ರಪತಿಯವರಿಂದ ಸಂತಾಪ : ಮೃತರ ಕುಟುಂಬಕ್ಕೆ 2 ಲಭ ಪರಿಹಾರ ಘೋಷಿಸಿದ ಪ್ರಧಾನಿ

ನವದೆಹಲಿ : ರಾಜ್ಯದ ತುಮಕೂರಿನಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದ ಭೀಕರ ರಸ್ತೆಯ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ 9 ಜನರು ಮೃತಪಟ್ಟಿದ್ದರು. 12 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಈ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ಅವರು ಟ್ವೀಟ್ ಮೂಲಕ ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ. ಅಪಘಾತದಲ್ಲಿ ಜೀವ ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ. ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಹಾಗೆಯೇ ರಾಷ್ಟ್ರಪತಿಯವರು ಅತೀವ ಸಂತಾಪ ವ್ಯಕ್ತಪಡಿಸಿದ್ದು, ಗಾಯಗೊಂಡವರು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಆಶಿಸಿದ್ದಾರೆ.

More News

You cannot copy content of this page