ಮಂಗಳೂರು: ಪೋಕ್ಸೊ ಕೇಸ್ ನಲ್ಲಿ ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರನ್ನು ಬಂಧನ ಕುರಿತು ಮಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಯಿ ಮೊದಲ ಪ್ರತಿಕ್ರಿಯೆ ನೀಡಿದ್ದು, ತನಿಖೆ ನಡೆಯುತ್ತಿರುವಾಗ ಈ ಬಗ್ಗೆ ಮಾತನಾಡೋದು ಸರಿ ಅಲ್ಲ. ಎಲ್ಲವೂ ಕಾನೂನಿನ ಪ್ರಕಾರವೇ ನಡೆಯುತ್ತಿದೆ ಎಂದು ತಿಳಿಸಿದರು.
ಇದುವರೆಗೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದ ಮುಖ್ಯಮಂತ್ರಿ ಅಥವಾ ಸಚಿವರುಗಳು ಇದೀಗ ಹೇಳಿಕೆ ನೀಡಲು ಮುಂದಾಗಿದ್ದಾರೆ. ಶ್ರೀಗಳನ್ನು ಬಂಧಿಸುವಲ್ಲಿ ವಿಳಂಬವಾಗಿಲ್ಲ. ನಾವು ಪೊಲೀಸರಿಗೆ ಮುಕ್ತವಾಗಿ ತನಿಖೆ ನಡೆಸಲು ಫ್ರೀ ಹ್ಯಾಂಡ್ ನೀಡಿದ್ದೇವೆ. ಪೊಲೀಸರು ತಮ್ಮ ಕೆಲಸವನ್ನು ಮಾಡುತ್ತಾರೆ ಎಂದು ಹೇಳಿದರು.
ಮುರುಘಾ ಶ್ರೀಗಳಿಗೆ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ?
ಇನ್ನು ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿರೋದರಿಂದ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೃದಯದಲ್ಲಿರೋ ನರಗಳು ಬ್ಲಾಕ್ ಆಗಿರೋ ಬಗ್ಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆ ಸರ್ಜನ್ ಬಸವರಾಜ್ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯ ತಜ್ಞ ವೈದ್ಯರ ಸಲಹೆ ಪಡೆದು ಹೆಚ್ಚಿನ ಚಿಕಿತ್ಸೆ ಬಗ್ಗೆ ನಿರ್ಧಾರ ಮಾಡಲಿದ್ದಾರೆ. ಶ್ರೀಗಳಿಗೆ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತೆ ಅಂತಾ ಮಾಹಿತಿ ತಿಳಿದು ಬಂದಿದೆ.