HAPPY BIRTHDAY KICHACHA SUDEEP: ಚಿತ್ರನಟ ಸುದೀಪ್ ಪುಣ್ಯಕೋಟಿ ಯೋಜನೆಗೆ ರಾಯಭಾರಿ

ಬೆಂಗಳೂರು: ರಾಜ್ಯ ಸರ್ಕಾರದ ಬಹು ಮಹತ್ವಾಕಾಂಕ್ಷಿಯ ಪುಣ್ಯಕೋಟಿ ಯೋಜನೆಗೆ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ.
ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಬೆಂಗಳೂರಿನಲ್ಲಿ ಇಂದು ಈ ವಿಷಯ ತಿಳಿಸಿದ್ದು, ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆಲಾಗಿತ್ತು. ತಾವು ಈ ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ ಎಂದು ಮನವಿ ಮಾಡಲಾಗಿತ್ತು.
ಅದಕ್ಕೆ ಅವರು ಸಮ್ಮತಿ ಸೂಚಿಸಿರುವ ಹಿನ್ನೆಲೆಯಲ್ಲಿ ಇಂದು ಅವರನ್ನು ನೇಮಕ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು. ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚಾರಪಡಿಸಿ, ಹೈನುಗಾರಿಕೆಗೆ ಉತ್ತೇಜನ ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈಜೋಡಿಸಿ, ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಲು ತಮ್ಮನ್ನು ತಮ್ಮ ಜನ್ಮದಿನದ ಈ ಶುಭಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆ ಯ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ತಿಳಿಸಲು ಹರ್ಷಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.

ಸುದೀಪ್ ಅವರು ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪ್ರಭು ಚವ್ಹಾಣ್ ತಿಳಿಸಿದರು. ರಾಜ್ಯದಲ್ಲಿ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಕಲ್ಯಾಣ ಮಂಡಳಿ, ಪ್ರಾಣಿ ಸಹಾಯವಾಣಿ, 100 ಸರ್ಕಾರಿ ಗೋಶಾಲೆಗಳು, ಪಶು ಸಂಜೀವಿನಿ ಆ್ಯಂಬುಲೆನ್ಸ್, ಗೋಮಾತಾ ಸಹಕಾರ ಸಂಘ, ಆತ್ಮನಿರ್ಭರ ಗೋಶಾಲೆ, ಸಂಚಾರಿ ಪಶು ಚಿಕಿತ್ಸಾ ವಾಹನಗಳು, ಪಶು ಜಿಲ್ಲಾಸ್ಪತ್ರೆಗಳ ನಿರ್ಮಾಣ, ಸ್ಪೇಷಲ್, ಸೂಪರ್ ಸ್ಪೇಷಾಲಿಟಿ ಹಾಗೂ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಗಳು, 100 ಪಶು ಚಿಕಿತ್ಸಾಲಯಗಳು, 400 ಪಶು ವೈದ್ಯರ ನೇಮಕಾತಿ, 250 ಕಿರಿಯ ಪಶು ವೈದ್ಯಕೀಯ ಸಹಾಯಕರ ನೇಮಕಾತಿ, ಪುಣ್ಯಕೋಟಿ ದತ್ತು ಯೋಜನೆ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಇದೀಗ ಕಿಚ್ಚ ಸುದೀಪ್ ರಾಯಭಾರಿಯಾಗಲು ಒಪ್ಪಿರುವುದು ಗೋಸೇವೆಯಲ್ಲಿ ತೊಡಗಿರುವ ನಮಗೆ ಆನೆಬಲ ಬಂದಂತಾಗಿದೆ ಎಂದು ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.

More News

You cannot copy content of this page