CYRUS MISTRY DEMISE: ಟಾಟಾ ಸಮೂಹದ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ದುರ್ಮರಣ

ಮುಂಬೈ : ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಸೈರಸ್ ಮಿಸ್ತ್ರಿ ಅವರು ರಸ್ತೆ ಅಪಘಾತದಲ್ಲಿ ಇಂದು ದುರ್ಮರಣಕ್ಕೀಡಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಸಲ್ಲಿ 54 ವರ್ಷದ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ್ದಾರೆ. ಅವರ ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ.
ಮಿಸ್ತ್ರಿ ಅವರ ಅವರ ಜತೆ ಸಂಚರಿಸುತ್ತಿದ್ದ ಕಾರು ಚಾಲಕ ಸೇರಿದಂತೆ ಇನ್ನಿಬ್ಬರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಿಸ್ತ್ರಿ ಅವರು ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಅಹಮದಾಬಾದ್ ನಿಂದ ಮುಂಬೈಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು ಪಾಲ್ಘಾರ್ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ
ಮಿಸ್ತ್ರಿ ಅವರನ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸೇರಿದಂತೆ ಅನೇಕ ರಾಜಕಾರಣಿಗಳು ಉದ್ಯಮಿಗಳು ಸಂತಾಪ ಸೂಚಿಸಿದ್ದಾರೆ.

ಸೈರಸ್ ಅವರ ಅಕಾಲಿಕ ನಿಧನದಿಂದ ಆಘಾತವಾಗಿದ್ದು, ಅವರು ಭಾರತದ ಆರ್ಥಿಕತೆಯಲ್ಲಿ ನಂಬಿಕೆಯಿಟ್ಟಿದ್ದ ಭರವಸೆಯ ಉದ್ಯಮಿಯಾಗಿದ್ದರು. ಅವರ ನಿಧನದಿಂದ ವಾಣಿಜ್ಯ ಮತ್ತು ಉದ್ಯಮಲೋಕಕ್ಕೆ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

#cyrus mistry #narendra modi #prime minister #tatasons former president #car accident #maharastra #businessmen #death

More News

You cannot copy content of this page