ತುಮಕೂರು : ಆಂಧ್ರಪ್ರದೇಶದ ಪೆನುಗೊಂಡದಿಂದ ತುಮಕೂರಿಗೆ ಅಕ್ಕಿ ಸಾಗಣೆ ಮಾಡುತ್ತಿದ್ದ ವಾಹನ ಸಮೇತ ವ್ಯಕ್ತಿಯೊಬ್ಬ ನೀರಿನಲ್ಲಿ ಕೊಚ್ಚಿ ಹೋದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ವಡ್ಡಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಲ್ಲಪ್ಪನಹಳ್ಳಿಗ್ರಾಮದ ದೊಡ್ಡ ಹಳ್ಳದಲ್ಲಿ ನಡೆದಿದೆ.
ಇಂದು ಮುಂಜಾನೆ ಈ ಘಟನೆ ನಡೆದಿದ್ದು, ವಾಹನ ಮತ್ತು ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿಯ ಶೋಧ ಕಾರ್ಯ ನಡೆಸಲಾಗುತ್ತಿದೆ. ಆದರೆ ಇದುವರೆಗೂ ವ್ಯಕ್ತಿ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ವಾಹನದಲ್ಲಿದ್ದ ಇಬ್ಬರ ಪೈಕಿ ಒಬ್ಬ ವ್ಯಕ್ತಿ ಅಪಾಯದಿಂದ ಪಾರಾಗಿದ್ದು, ಮತ್ತೊಬ್ಬ ನೀರಿನ ರಭಸಕ್ಕೆ ವಾಹನ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.


ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಾಪತ್ತೆಯಾಗಿರುವ ವ್ಯಕ್ತಿಯ ಪತ್ತೆಗೆ ಸೂಕ್ತ ಕ್ರಮ ಕೈಗೊಂಡಿದ್ದಾರೆ.
