ಬೆಳಗಾವಿ : ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ಸಚಿವ ಉಮೇಶ ಕತ್ತಿ ಮೃತದೇಹವನ್ನು ಬೆಳಗಾವಿಗೆ ಕೊಂಡೊಯ್ಯಲಾಗಿದೆ.
ಬೆಳಿಗ್ಗೆ 9ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪಾರ್ಥೀವ ಶರೀರ, 10:30 ಕ್ಕೆ ಸಂಕೇಶ್ವರದ ಹಿರಣ್ಯಕೇಶಿ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕತ್ತಿ ಹುಟ್ಟೂರಿಗೆ 12 ಗಂಟೆಗೆ ಬೆಲ್ಲದ ಬಾಗೇವಾಡಿಗೆ ತೆಗೆದುಕೊಂಡು ಹೋಗಿ ಅಲ್ಲಿಯೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಂಜೆ 5 ಗಂಟೆಗೆ ಬೆಲ್ಲದ ಬಾಗೇವಾಡಿ ತೋಟದಲ್ಲಿ ಅಂತ್ಯಕ್ರಿಯೆ ನೇರವೇರಿಸಲಾಗುವುದು ಎಂದು ಮಾಜಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ತಿಳಿಸಿದ್ದಾರೆ.

ಮೆರವಣಿಗೆ ಮೂಲಕ ಹುಟ್ಟೂರಿಗೆ ಪಾರ್ಥೀವ ಶರೀರ
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮಕ್ಕೆ ಉಮೇಶ್ ಕತ್ತಿ ಪಾರ್ಥೀವ ಶರೀರವನ್ನು ಮಿಲಿಟರಿ ವಾಹನದಲ್ಲಿ ಮೆರವಣಿಗೆ ಮೂಲಕ ಕೊಂಡೊಯ್ಯಲು ಸಿದ್ದತೆ ನಡೆಸಲಾಗಿದೆ.
ಬೆಳಗಾವಿ ವಿಮಾನ ನಿಲ್ದಾಣದಿಂದ ನೇರವಾಗಿ ಬೆಲ್ಲದ ಬಾಗೇವಾಡಿ ಗ್ರಾಮಕ್ಕೆ ಬರೋ ಪಾರ್ಥಿವ ಶರೀರ, 10.30ರಿಂದ 4ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಸಂಜೆ 5ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

ಬೆಲ್ಲದ ಬಾಗೇವಾಡಿಯಲ್ಲಿನ ಅವರ ತೋಟದಲ್ಲಿ ತಂದೆ -ತಾಯಿಯ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆಗೆ ಎಲ್ಲಾ ಸಿದ್ದತೆ ನಡೆಸಲಾಗುತ್ತಿದೆ.