ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ಅಂದಾಜು 1800 ಕೋಟಿ ರೂಪಾಯಿ ವೆಚ್ಚವಾಗುವ ಸಾಧ್ಯತೆಗಳಿವೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.
ಭಾನುವಾರ ಅಯೋಧ್ಯೆಯಲ್ಲಿ ನಡೆದ ಟ್ರಸ್ಟ್ ನ ಪ್ರಮುಖರ ಸಭೆ ಭಾನುವಾರ ನಡೆದಿದ್ದು, ಈ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಈ ಹಿಂದೆ 400 ಕೋಟಿ ರೂಪಾಯಿ ವೆಚ್ಚ ತಗುಲಬಹುದು ಎಂದು ಅಂದಾಜಿಸಲಾಗಿತ್ತು. ಇದೀಗ ವೆಚ್ಚ ಏರಿಕೆ ಕಂಡಿದೆ. ರಾಮಮಂದಿರವು 2023 ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿತ್ತು ಎಂದು ಸಭೆಯಲ್ಲಿ ತಿಳಿಸಿದರು.
ರಾಮಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ವಿಗ್ರಹ ನಿರ್ಮಾಣಕ್ಕೆ ಸಮಿತಿ ನಿರ್ಣಯಿಸಿದೆ. ಶಿಲ್ಪ ಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪನೆ ಮಾಡಲು ತೀರ್ಮಾನಿಸಲಾಗಿದೆ. ರಾಮಮಂದಿರ ನಿರ್ಮಾಣಕ್ಕೆ ಭಕ್ತರಿಂದ ದೇಣಿಗೆಯ ಮಹಾಪೂರವೇ ಹರಿದುಬರುತ್ತಿದ್ದು, ಪ್ರತಿತಿಂಗಳ 50 ಲಕ್ಷಕ್ಕೂ ಅಧಿಕ ದೇಣಿಗೆ ಸಂಗ್ರಹವಾಗುತ್ತಿದೆ. ಒಮ್ಮೊಮ್ಮೆ ಇದು ಒಂದು ಕೋಟಿ ರೂಪಾಯಿಗೂ ಮೀರಿದೆ ಎಂದು ಅವರು ವಿವರ ನೀಡಿದರು.

ಈವರೆಗೆ ಅಂದಾಜು 300 ಕೋಟಿಯಷ್ಟು ಹಣವನ್ನು ಖರ್ಚು ಮಾಡಲಾಗಿದೆ. ಇದುವರೆಗೂ ದೇಣಿಗೆ ಹಣದಿಂದಲೂ ಮಂದಿರ ನಿರ್ಮಾಣವಾಗಿದೆ. ಮೂಲಧನ ಸಾವಿರ ಕೋಟಿಗೂ ಮೀರಿದೆ, ಈ ಸಂಬಂಧ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.
ಕರ್ನಾಟಕ ಭಕ್ತರಿಂದ ಸ್ವರ್ಣ ಶಿಖರ
ಕರ್ನಾಟಕ ಭಕ್ತರಿಂದ ಸ್ವರ್ಣ ಶಿಖರಕ್ಕೆ ಬೇಡಿಕೆ ಇದ್ದು, ಇದನ್ನು ಪೇಜಾವರ ಶ್ರೀಗಳು ಸಭೆಯಲ್ಲಿ ಮಂಡಿಸಿದ್ದಾರೆ. ಭವ್ಯ ರಾಮಮಂದಿರದ ಪ್ರಧಾನ ಗರ್ಭಗುಡಿಯ ಶಿಖರಕ್ಕೆ ಕರ್ನಾಟಕದಿಂದ ಚಿನ್ನದ ಶಿಖರವನ್ನು ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದ್ದು, ರಾಮಭಕ್ತ ಹನುಮನ ಪರಿವ್ತರ ನೆಲೆಯಾಗಿರುವ ಕರ್ನಾಟಕದಿಂದ ಸ್ವರ್ಣ ಶಿಖರವನ್ನು ಅರ್ಪಿಸುವ ಬಯಕೆಯಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಹಂಪೆಯಿಂದ ಸ್ವರ್ಣ ಶಿಖರದ ಯಾತ್ರೆಯನ್ನು ಕೈಗೊಂಡು ರಾಜ್ಯದ್ಯಂತ ಅದು ಸಂಚರಿಸಿ ಅಯೋಧ್ಯೆಗೆ ತಲುಪಿಸುವ ಯೋಜನೆ ರೂಪಿಸಲಾಗಿದೆ ಎನ್ನಲಾಗಿದೆ.
#AYODHYA #RAM MANDIR #RAMJANMABHOOMI TRUST #PEJAWARA SRI #CHAMPATH ROY




