ಕೋಲ್ಕತ್ತಾ : ರಾಜ್ಯ ಸಚಿವಾಲಯಕ್ಕೆ ಕಾಲ್ನಡಿಗೆ ಜಾಥಾ ಕಾರ್ಯಕ್ರಮವನ್ನು ಮಂಗಳವಾರ ಬಿಜೆಪಿ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಹಿಂಸಾಚಾರ ನಡೆದಿತ್ತು. ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸರೂ ಗಾಯಗೊಂಡಿದ್ದರು. ಕೋಲ್ಕತ್ತಾದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು.
ನಗರದ ಕೇಂದ್ರ ಭಾಗದಲ್ಲಿ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ಪೊಲೀಸರತ್ತ ಕಲ್ಲುಗಳನ್ನು ಪ್ರತಿಭಟನಾಕಾರರು ತೂರಿದ್ದರು. ಈ ವೇಳೆ ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿಯಿಂದ ಪ್ರತಿಭಟನಾಕಾರರನ್ನು ಚದುರಿಸಿ, ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರು.
ಈ ವಿಚಾರವಾಗಿ ಸಂಬಂಧಪಟ್ಟಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಶಸ್ತ್ರಸಜ್ಜಿತ ಗೂಂಡಾಗಳನ್ನು ಬಿಜೆಪಿ ರಾಜ್ಯದ ಹೊರಗಿನಿಂದ ಕರೆತಂದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸರ್ಕಾರ ಮತ್ತು ಪೊಲೀಸರು ಈ ವಿಚಾರವಾಗಿ ಬಹಳ ಸಂಯಮದಿಂದ ವರ್ತಿಸಿತ್ತು., ಹಿಂಸೆಗಿಳಿದವರ ಮೇಲೆ ಪೊಲೀಸರು ಗುಂಡು ಹಾರಿಸಬಹುದಿತ್ತು ಎಂದು ಅವರು ತಿಳಿಸಿದ್ದಾರೆ. ಬೆಂಕಿ ಹಚ್ಚುವುದು ಮತ್ತು ಪೊಲೀಸರ ಮೇಲೆ ದಾಳಿ ಮಾಡುವುದು ಕಾನೂನಿಗೆ ವಿರುದ್ಧವಾಗಿದೆ. ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ರಾಜಕೀಯ ಮತ್ತು ಸಮಾಜ ವಿರೋಧಿ ಚಟುವಟಿಕೆಗಳು ಒಂದಾಗಿ ನಡೆಸಲು ಸಾಧ್ಯವಿಲ್ಲ ಎಂದು ಗಡುಗಿದ್ದಾರೆ.

ನಾವು ಗೂಂಡಾಗಿರಿಯನ್ನು ಸಹಿಸಲ್ಲ, ಶಾಂತಿಯುತ ಪ್ರತಿಭಟನೆ ಯಾರಿಗೂ ಸಮಸ್ಯೆಯಿಲ್ಲ ಎಂದು ಮಮತಾ ಬ್ಯಾನರ್ಜಿ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
#west bengal #cm mamta banerjee #voilence #bjp #goods #protest