MURUGHA SHARANARU : ಮುರುಘಾ ಮಠದ ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗ :ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ.
ಫೋಕ್ಸೋ ಕಾಯಿದೆಯಡಿ ಬಂಧನಕ್ಕೊಳಗಾಗಿರುವ ಶರಣರಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲು ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.

ಶರಣರ ಜತೆ ಬಂಧನಕ್ಕೊಳಗಾಗಿರುವ ಎರಡನೇ ಆರೋಪಿ ಮಹಿಳಾ ವಾರ್ಡನ್ ನ್ಯಾಯಾಂಗ ಅವಧಿಯನ್ನು ಸೆಪ್ಟಂಬರ್ 27ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಪ್ರಸ್ತುತ ಚಿತ್ರದುರ್ಗದ ಜಿಲ್ಲಾ ಕಾರಾಗೃಹದಲ್ಲಿ ಶರಣರನ್ನು ಪೊಲೀಸರು ಕರೆದೊಯ್ದಿದ್ದಾರೆ.

#MURUGHA MATT #CHITHRADURGA #SESSIONS COURT #JUDICIAL CUSTODY EXTENDED #HOSTEL WARDEN

More News