MAHA KUMBH MELA: ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋ ಬಿಡುಗಡೆ ಮಾಡಿದ ಮುಖ್ಯಮಂತ್ರಿ

ಬೆಂಗಳೂರು: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ‌ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು.
ಮುಖ್ಯಮಂತ್ರಿಗಳ ರೇಸ್ ಕೋರ್ಸ್ ನಿವಾಸದಲ್ಲಿ ಮಹಾಕುಂಭಮೇಳದ ಲೋಗೋವನ್ನು ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಭ ಕೋರಿದರು.
ಅಕ್ಟೋಬರ್ 13 ರಿಂದ 16 ರವರೆಗೆ ಕೆಆರ್ ಪೇಟೆಯ ಅಂಬಿಗರಹಳ್ಳಿ, ಸಂಗಾಪುರ ಹಾಗೂ ಪುರದ ಕಾವೇರಿ-ಹೇಮಾವತಿ-ಲಕ್ಷ್ಮಣ ತೀರ್ಥಗಳ ಸಮಾಗಮವಾಗುವ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಬಾಮೇಳ ನಡೆಯಲಿದೆ. ಪ್ರತಿದಿನ ಗಂಗಾರತಿ, ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಮಹಾಕುಂಭಮೇಳದ ವಿಶೇಷ ಲೋಗೋ ಸಿದ್ದಪಡಿಸಲಾಗಿದೆ.

ಇದೇ ಸಂದರ್ಭದಲ್ಲಿ ಮಹಾಕುಂಭಮೇಳದ ಸಿದ್ದತೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾಹಿತಿ ಪಡೆದರು. ಇದೊಂದು ರಾಜ್ಯದ ಮಹತ್ವದ ಕಾರ್ಯಕ್ರಮವಾಗಿದೆ. ಕುಂಭಮೇಳಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆ ಹಾಗೂ ವಿಶೇಷ ಕಾಳಜಿವಹಿಸಿ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ವಿಧಾನಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್, ಶಾಸಕ ನಾಗೇಂದ್ರ, ಮಂಡ್ಯ ಜಿಲ್ಲಾಧಿಕಾರಿ ಎಸ್ ಅಶ್ವಥಿ, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.

#south india maha kumbh mela #k r pet #mandya #cm bommai

More News

You cannot copy content of this page