ಮೈಸೂರು : ಬೆಂಗಳೂರು- ಮೈಸೂರು ನಡುವೆ ಸಂಚರಿಸುತ್ತಿರುವ ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಒಡೆಯರ್ ಎಕ್ಸ್ ಪ್ರೆಸ್ ಎಂದು ಬದಲಾಯಿಸಿ ಮರು ನಾಮಕರಣ ಮಾಡಿ ಕೇಂದ್ರ ರೈಲ್ವೆ ಮಂಡಳಿ ಇಂದು ಆದೇಶ ಹೊರಡಿಸಿದೆ.

ಇದರ ಜತೆಯಲ್ಲಿಯೇ ಮೈಸೂರು – ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿಗೆ ಕುವೆಂಪು ಎಕ್ಸ್ ಪ್ರೆಸ್ ಎಂದು ಮರು ನಾಮಕರಣ ಮಾಡಲಾಗಿದೆ ಎಂದು ಕೇಂದ್ರ ರೈಲ್ವೆ ಮಂಜಳಿಯ ಉಪನಿರ್ದೇಶಕ ರಾಜೇಶ್ ಕುಮಾರ್ ನೈರುತ್ಯ ರೈಲ್ವೆ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.
ಶುಕ್ರವಾರದ ಶುಭ ಸುದ್ದಿ!
— Pratap Simha (@mepratap) October 7, 2022
ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು "ಕುವೆಂಪು ಎಕ್ಸ್ಪ್ರೆಸ್'' ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್ @AshwiniVaishnaw ji ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ @JoshiPralhad ಸರ್! pic.twitter.com/uZzHt1uzZz
ಈ ಪತ್ರವನ್ನು ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕೇಂದ್ರದ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ಸಚಿವ ಪ್ರಹ್ಲಾದ್ ಜೋಶಿಯವರಿಗೆ ಧನ್ಯವಾದ ಹೇಳಿದ್ದಾರೆ.
#southern railway #tippu express #wodeyar express #mysore-talaguppa express #kuvempu express #mp pratap simha