ಬೆಂಗಳೂರು; ರಾಜ್ಯದ ಮುಸ್ಲಿಮರು ಹಾಗೂ ಕ್ರೈಸ್ತರಿಗೆ ನೀಡಿರುವ ಮೀಸಲಾತಿಯನ್ನು ಹಿಂಪಡೆಯಬೇಕೆಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಬೆಲ್ಲದ್, ಮುಸ್ಲಿಮರು ಹಾಗೂ ಕ್ರೈಸ್ತರಿಗೆ ಒಬಿಸಿ ಅಡಿಯಲ್ಲಿ ನೀಡಿರುವ ಮೀಸಲಾತಿ ಹಿಂಪಡೆದು ಆ ಕೋಟಾದಲ್ಲಿ ಲಿಂಗಾಯತರು, ಕುರುಬರು ಮತ್ತು ಮರಾಠರಿಗೆ ಮರುಹಂಚಿಕೆ ಮಾಡುವಂತೆ ಒತ್ತಾಯಿಸಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಮುಸ್ಲಿಮರು ಹಾಗೂ ಕ್ರೈಸ್ತರಿಗೆ ನೀಡಿರುವ ಮೀಸಲಾತಿ ತಾರತಮ್ಯದಿಂದ ಕೂಡಿದೆ. ಈ ಕೂಡಲೇ ಈ ಮೀಸಲಾತಿ ವಾಪಸ್ ಪಡೆದು ಬೇರೆ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿದ್ದಾರೆ.