CHIEF JUSTICE: ಸುಪ್ರೀಂಕೋರ್ಟ್ ನ 50 ನೇ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಚಂದ್ರಚೂಡ್ ಶಿಫಾರಸ್ಸು

ನವದೆಹಲಿ : ಭಾರತದ 49 ನೇ ಮುಖ್ಯ ನ್ಯಾಯಮೂರ್ತಿ ಆಗಿರುವ ಉದಯ್ ಉಮೇಶ್ ಲಲಿತ್ ಅವರು ತಮ್ಮ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ.
ಉನ್ನತ ನ್ಯಾಯಾಲಯದ ನ್ಯಾಯಾಧೀಶರು ನಡೆಸಿದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ ಈ ಶಿಫಾರಸು ಮಾಡಲಾಗಿದೆ. ಸಿಜೆಐ ಉದಯ್ ಉಮೇಶ್ ಲಲಿತ್ ಅವರು ಇಂದು ಬೆಳಗ್ಗೆ 10.15ಕ್ಕೆ ತಮ್ಮ ಉತ್ತರಾಧಿಕಾರಿ ಹೆಸರಿನಲ್ಲಿ ಸರ್ಕಾರಕ್ಕೆ ಪತ್ರ ಕಳುಹಿಸಿದ್ದಾರೆ. ಇದರೊಂದಿಗೆ ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 9 ರಂದು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಮತ್ತು ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.

ಹಿಂದೆ ಕಾನೂನು ಮತ್ತು ನ್ಯಾಯ ಸಚಿವಾಲಯವು ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರಿಗೆ ಪತ್ರ ಬರೆದು ಹೊಸ ಸಿಜೆಐ ಹೆಸರನ್ನು ಶಿಫಾರಸು ಮಾಡಿ ನೇಮಕಾತಿಗೆ ಸಂಬಂಧಿಸಿದ ಜ್ಞಾಪಕ ಪತ್ರ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ಮನವಿ ಮಾಡಿತ್ತು.
ಪ್ರಸ್ತುತ ಮುಖ್ಯ ನ್ಯಾಯಾಧೀಶರಾಗಿ ಉದಯ್ ಉಮೇಶ್ ಅವರು ಸೇವೆ ಸಲ್ಲಿಸುತ್ತಿದ್ದಾರೆ. ನ್ಯಾಯಾಧೀಶರಾಗಿ ಉನ್ನತೀಕರಿಸುವ ಮೊದಲು, ಅವರು ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲರಾಗಿ ಅಭ್ಯಾಸ ಮಾಡಿದರು. ಹಾಗೂ ಅವರು ಸುಪ್ರೀಂ ಕೋರ್ಟ್‌ಗೆ ನೇರವಾಗಿ ಉನ್ನತೀಕರಿಸಲ್ಪಟ್ಟ ಆರು ಹಿರಿಯ ವಕೀಲರಲ್ಲಿ ಒಬ್ಬರಾಗಿದ್ದರು.
ನೂತನವಾಗಿ ಶಿಫಾರಸ್ಸು ಆಗಿರುವ ಚಂದ್ರಚೂಡ್ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮತ್ತು ಬಾಂಬೆ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರಾಗಿದ್ದಾರೆ. ಪ್ರಸ್ತುತ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

More News

You cannot copy content of this page